ಶುಕ್ರವಾರ, ಫೆಬ್ರವರಿ 26, 2021
24 °C

ಮೈಸೂರು: ಸರಗೂರು ಸಮೀಪ ಆನೆ ದಾಳಿಗೆ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬಳಿ ಭಾನುವಾರ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ‌.

ಕೇರಳದ ಜೋಯಿ (45) ಮೃತಪಟ್ಟವರು. ಇವರು ಇಲ್ಲಿ ಜಮೀನನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದರು. ಜಮೀನಿನಲ್ಲಿ ಕೆಲಸ ಮಾಡುವಾಗ ಒಂಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬೀಸಾಡಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸದ್ಯ ಒಂಟಿ ಸಲಗವು ಜಮೀನಿನಲ್ಲೆ ಅಲೆಯುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು