ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‍ನಾಳೆ ‘ರೈತ ಚಳವಳಿ ಆತ್ಮಾವಲೋಕನ’

Last Updated 28 ಮೇ 2022, 19:38 IST
ಅಕ್ಷರ ಗಾತ್ರ

ಮೈಸೂರು: ‘ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಮೇ 30ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಚಳವಳಿ– ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಆಯೋಜಿಸಲಾಗಿದೆ’ ಎಂದು ಸಂಘದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ತಿಳಿದರು.

‘ಸಾರಿಗೆ ನಿಗಮಗಳ ನೌಕರರ ಮುಷ್ಕರ ವಾಪಸ್‌ಗಾಗಿ ಹಣ ಪಡೆದಿರುವ ಆರೋಪಗಳು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿದೆ. ಆರೋಪದ ಕುರಿತು ಚರ್ಚೆ ನಡೆಸಿ ಮುಂದಿನ ನಡೆ ಕೈಗೊಳ್ಳಲು ಸಭೆ ತೀರ್ಮಾನಿಸಲಿದೆ’ ಎಂದು ಶನಿವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಸಭೆಯಲ್ಲಿ ಚುಕ್ಕಿ ನಂಜುಂಡ ಸ್ವಾಮಿ, ರಾಕೇಶ್ ಟಿಕಾಯತ್, ಯುದ್ಧ ವೀರ್ ಸಿಂಗ್, ಕವಿತಾ ಕುರುಗಂಟಿ ಭಾಗವಹಿಸಲಿದ್ದಾರೆ. ಮಹತ್ವದ ನಿರ್ಧಾರ ಕೈಗೊಳ್ಳಲಿದ್ದು, ಜನತೆಗೆ ಮಾಹಿತಿ ನೀಡಲಾಗುವುದು’ ಎಂದರು.

ರಾಜ್ಯ ಸಂಚಾಲಕ ವಿದ್ಯಾಸಾಗರ್ ರಾಮೇಗೌಡ, ಮುಖಂಡರಾದ ಇಮ್ಮಾವು ರಘು, ವೆಂಕಟೇಶ್‌, ಕೃಷ್ಣೇ ಗೌಡ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT