ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ಹಾರಿ ರೈತ ಆತ್ಮಹತ್ಯೆ

Last Updated 19 ಅಕ್ಟೋಬರ್ 2018, 19:42 IST
ಅಕ್ಷರ ಗಾತ್ರ

ಹುಣಸೂರು: ತಾಲ್ಲೂಕಿನ ಹೊನ್ನಿಕುಪ್ಪೆಯ ರೈತ ಸೋಮೇಶ್ (48) ಎಂಬುವರು ಸಾಲಬಾಧೆಯಿಂದ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮೇಶ್‌ ಅವರದ್ದು ಅವಿಭಕ್ತ ಕುಟುಂಬವಾಗಿದ್ದು, 3 ಎಕರೆ 18 ಗುಂಟೆ ಜಮೀನು ಹೊಂದಿದ್ದರು. ಇದರಲ್ಲಿ ತಂಬಾಕು ಬೆಳೆಯುತ್ತಿದ್ದರು. ಲೇವಾದೇವಿಗಾರರಿಂದ ₹5 ಲಕ್ಷ ಸಾಲ ಪಡೆದಿದ್ದರು. ಇದಕ್ಕಾಗಿ, ಲೇವಾದೇವಿಗಾರರಿಗೆ ಚೆಕ್‌ಗಳನ್ನು ನೀಡಿದ್ದರು. ಆದರೆ, ಸಕಾಲಕ್ಕೆ ಸಾಲ ತೀರಿಸದ ಕಾರಣ, ಲೇವಾದೇವಿಗಾರರು ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಒಂದು ಪ್ರಕರಣದಲ್ಲಿ ಸೋಮೇಶ್‌ ಜಾಮೀನು ಪಡೆದಿದ್ದರು. ಮತ್ತೊಂದು ಪ್ರಕರಣದಲ್ಲಿ ವಾರಂಟ್‌ ಜಾರಿಯಾಗಿತ್ತು.

ಪೊಲೀಸರು ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ್ದರು. ಹೀಗಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮನೆಯವರೊಂದಿಗೆ ಸೋಮೇಶ್‌ ಜಗಳ ಮಾಡಿಕೊಂಡಿದ್ದರು. ಬಳಿಕ, ಗ್ರಾಮದ ಪಕ್ಕದ ಕೆಂಚನಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮೇಶ್‌ ಅವರ ತಮ್ಮ ಶಿವರಾಜ್‌ ತಿಳಿಸಿದ್ದಾರೆ.

ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT