ಮಂಗಳವಾರ, ಡಿಸೆಂಬರ್ 1, 2020
21 °C

ಮೈಸೂರು: ಆರ್‌ಟಿಒ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತರಕಾರಿ ಸಾಗಣೆ ಮಾಡು ತ್ತಿದ್ದ 2 ಲಾರಿಗಳನ್ನು ವಶಪಡಿಸಿಕೊಂಡ ಆರ್‌ಟಿಒ ಅಧಿಕಾರಿಗಳ ವಿರುದ್ಧ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ನೇತೃತ್ವದಲ್ಲಿ ಇಲ್ಲಿನ ಆರ್‌ಟಿಒ ಕಚೇರಿ ಮುಂಭಾಗ ಸೇರಿದ ರೈತರು ಅಧಿಕಾರಿಗಳ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು.

ಗುಂಡ್ಲುಪೇಟೆಯಿಂದ ಮೈಸೂರಿಗೆ ಹಾಗೂ ಮೈಸೂರಿನಿಂದ ಕೇರಳಕ್ಕೆ ತರಕಾರಿಗಳನ್ನು ಕೊಂಡೊಯ್ಯುತ್ತಿದ್ದ 2 ಲಾರಿಗಳನ್ನು ನಿಯಮ ಉಲ್ಲಂಘನೆಯ ಆರೋಪ ಹೊರಿಸಿ ದೊಡ್ಡ ಪ್ರಮಾಣದ ದಂಡ ವಿಧಿಸಿದರೆ ಚಾಲಕರು ಹಣ ಎಲ್ಲಿಂದ ತರಬೇಕು ಎಂದು ರೈತರು ಪ್ರಶ್ನಿಸಿದರು.

ದಂಡ ವಿಧಿಸಿದ ನಂತರ ಅದರ ಪಾವತಿಗೆ ಕಾಲಾವಕಾಶ ಕೊಟ್ಟು ಕಳುಹಿಸಿದ್ದರೆ ರೈತರು ಶ್ರಮ ವಹಿಸಿ ಬೆಳೆದಿದ್ದ ತರಕಾರಿಗಳು ಉಳಿಯುತ್ತಿದ್ದವು. ಈಗ ವಶಪಡಿಸಿಕೊಂಡ ಕಾರಣದಿಂದಾಗಿ ತರಕಾರಿಗಳು ಒಂದು ರಾತ್ರಿ ಲಾರಿಯಲ್ಲೇ ಇದ್ದು ಗುಣಮಟ್ಟ ಕಳೆದುಕೊಂಡಿವೆ. ಇದರ ನಷ್ಟವನ್ನು ಅಧಿಕಾರಿಗಳು ಭರಿಸಬೇಕು ಎಂದು ಆಗ್ರಹಿಸಿದರು.‌

ಸ್ಥಳಕ್ಕೆ ಬಂದ ಅಧಿಕಾರಿಗಳು ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.

ಸಂಘಟನೆಯ ಅಧ್ಯಕ್ಷ ಮರಂಕಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ಮಂಡಕಳ್ಳಿ ಮಹೇಶ್, ಚಂದ್ರೇಗೌಡ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.