ಸೋಮವಾರ, ಜುಲೈ 4, 2022
23 °C

ಸೌಲಭ್ಯ ದೊರಕುತ್ತಿಲ್ಲ: ಮೈಸೂರಿನಲ್ಲಿ ಬಿ.ಸಿ.ಪಾಟೀಲ ಭಾಷಣದ ವೇಳೆ ರೈತರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತಾಲ್ಲೂಕಿನ ತಳೂರು ಗ್ರಾಮದಲ್ಲಿ ಶುಕ್ರವಾರ ನಡೆದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ ಅವರು ಮಾತನಾಡುತ್ತಿದ್ದಾಗ ರೈತರೊಬ್ಬರು ಎದ್ದು ನಿಂತು ನಿಜವಾದ ರೈತರಿಗೆ ಏನೂ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನೊಬ್ಬ ಪ್ರಗತಿಪರ ರೈತ. ಯಾವುದೇ ಸೌಲಭ್ಯ ನೀಡಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ ಎಂದು ಕಿಡಿಕಾರಿದರು. 

ಬಿ.ಸಿ.ಪಾಟೀಲ ಪ್ರತಿಕ್ರಿಯಿಸಿ, ಎಲ್ಲರ ಕರೆಯನ್ನು ಸ್ವೀಕರಿಸಲು ಆಗುವುದಿಲ್ಲ. ಅಧಿಕಾರಿಗಳಿಗೆ ಹೇಳಿ. ಈಗ ನಿಮ್ಮ ದೂರನ್ನೂ ಆಲಿಸುತ್ತೇನೆ ಎಂದು ಭರವಸೆ ನೀಡಿದರು.

ಓದಿ... ಗೃಹ ಖಾತೆ ಕೊಟ್ಟರೆ ನಿಭಾಯಿಸುವೆ: ಕೃಷಿ ಸಚಿವ ಬಿ.ಸಿ.ಪಾಟೀಲ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು