ಗುರುವಾರ , ಜುಲೈ 7, 2022
23 °C

ಪ್ಲಾನಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ (ಕಾಸ್ಮಾಸ್) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ನಾವು ಈಗ ದತ್ತಾಂಶಗಳನ್ನು ಸಂಗ್ರಹಿಸುತ್ತಿದ್ದೇವೆ. ಆದರೆ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕಿದೆ. ಅವುಗಳ ಬಳಕೆಯ ಲಾಭ ಸಮಾಜದ ಎಲ್ಲ ಕ್ಷೇತ್ರಗಳಿಗೂ ದಕ್ಕಬೇಕಿದೆ ಎಂದರು.

ಭಾರತ ವಿಶ್ವಗುರುವಾಗಲು ಇದೊಂದು ಮಹತ್ವದ ಹೆಜ್ಜೆ. ಇಲ್ಲಿ ಮೈಸೂರು ವಿಶ್ವವಿದ್ಯಾಲಯ 3 ಎಕರೆ ಜಾಗ ನೀಡಿದ್ದು, ಈ ಕೇಂದ್ರದಲ್ಲಿ ₹ 81 ಕೋಟಿ ವೆಚ್ಚದಲ್ಲಿ ಪ್ಲಾನಿಟೋರಿಯಂ ಅನ್ನು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಸ್ಥಾಪಿಸಲಿದೆ. ಯುವ ವಿಜ್ಞಾನಿಗಳು ಹೆಚ್ಚು ಹೆಚ್ಚು ಬರಬೇಕಿದೆ. ಅದರಲ್ಲಿ ಯುವತಿಯರ ಸಂಖ್ಯೆಯೂ ಗಣನೀಯವಾಗಿರಬೇಕಿದೆ. ಈ ನಿಟ್ಟಿನಲ್ಲಿ ಈ ಕೇಂದ್ರವು ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಸಂಸದ ಪ್ರತಾಪಸಿಂಹ, ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ.ಕೆ.ವಿಜಯರಾಘವನ್, ಅಣುಶಕ್ತಿ ವಿಭಾಗದ ಕಾರ್ಯದರ್ಶಿ ಕೆ.ಎನ್.ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ, ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ನಿರ್ದೇಶಕಿ ಪ್ರೊ.ಅನ್ನಪೂರ್ಣಿ ಸುಬ್ರಹ್ಮಣಿಯಂ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು