ಶನಿವಾರ, ಡಿಸೆಂಬರ್ 5, 2020
19 °C
ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡಮುಲಗೂಡು ಗ್ರಾಮದಲ್ಲಿ ಘಟನೆ

ಸುಟ್ಟ ಸ್ಥಿತಿಯಲ್ಲಿ ಗರ್ಭಿಣಿ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡಮುಲಗೂಡು ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಅವರ ಪತ್ನಿ ಶಾಂತಮ್ಮ (23) ಮೃತದೇಹವು ಅವರ ನಿವಾಸದಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.

ಮನೆಯ ಬಾಗಿಲ ಬಳಿಯೇ ಮೃತದೇಹ ಸಿಕ್ಕಿದ್ದು, ಪತಿ ಸೇರಿದಂತೆ ಮನೆಯಲ್ಲಿದ್ದ ಇತರೆ ಸದಸ್ಯರು ಪರಾರಿಯಾಗಿದ್ದಾರೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜನಗೂಡು ಅಶೋಕಪುರಂನ ಶಾಂತಮ್ಮ ಅವರು ಕಳೆದ 2 ವರ್ಷಗಳ ಹಿಂದೆಯಷ್ಟೇ ರಮೇಶ್‌ ಅವರನ್ನು ವಿವಾಹವಾಗಿದ್ದರು. ಸುಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯ ಬಾಗಿಲ ಬಳಿಯೇ ಕಾಣಿಸುತ್ತಿದ್ದಂತೆ ಗ್ರಾಮಸ್ಥರು ಸಂಜೆ 4 ಗಂಟೆ ಹೊತ್ತಿಗೆ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣ ಬಂದ ಪೊಲೀಸರು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಪತಿ ರಮೇಶ್ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಡಿವೈಎಸ್‌ಪಿ ಪ್ರಭಾಕರ್‌ರಾವ್ ಶಿಂಧೆ, ಸರ್ಕಲ್‌ ಇನ್‌ಸ್ಪೆಕ್ಟರ್ ಲವ, ಬನ್ನೂರು ಠಾಣೆ ಎಎಸ್‌ಐ ರಂಗಸ್ವಾಮಿ, ನಾರಾಯಣ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.