ಭಾನುವಾರ, ಮೇ 29, 2022
30 °C

ಮೈಸೂರು; ಥರ್ಮಾಕೋಲ್‌ ಕಾರ್ಖಾನೆಯಲ್ಲಿ ಬೆಂಕಿ, ದಟ್ಟ ಹೊಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಅಶೋಕಪುರಂ ರೈಲು ನಿಲ್ದಾಣದ ಹಿಂಭಾಗ ಇರುವ ಥರ್ಮಾಕೋಲ್‌ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ.

4 ಅಗ್ನಿಶಾಮಕ ವಾಹನಗಳಲ್ಲಿ ಸ್ಥಳಕ್ಕೆ ಬಂದಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ, ಕಾರ್ಖಾನೆಯೊಳಗೆ ಕಾರ್ಮಿಕರು ಸಿಲುಕಿಲ್ಲ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಲ್ಲರೂ ಹೊರ ಬಂದಿದ್ದಾರೆ. ಥರ್ಮಾಕೋಲ್‌ ಹಾಗೂ ಅದಕ್ಕೆ ಸಂಬಂಧಿಸಿದ ದಹ್ಯ ವಸ್ತುಗಳು ಸುಟ್ಟು ಹೋಗಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ ಎಂದು ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಸರಸ್ವತಿಪುರಂ ಅಗ್ನಿಶಾಮಕ ಠಾಣೆಯಿಂದ 2, ಬನ್ನಿಮಂಟಪ ಹಾಗೂ ಹೆಬ್ಬಾಳ ಠಾಣೆಗಳಿಂದ ತಲಾ ಒಂದೊಂದು ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು