ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಲ್ಲಿ ತ್ಯಾಜ್ಯ ಸಂಗ್ರಹಣ ಕೇಂದ್ರಕ್ಕೆ ಬೆಂಕಿ

Last Updated 22 ಜನವರಿ 2022, 8:43 IST
ಅಕ್ಷರ ಗಾತ್ರ

ಮೈಸೂರು: ಅಗ್ರಹಾರದ ವಾಣಿವಿಲಾಸ ಮಾರುಕಟ್ಟೆಯ ಹಿಂಭಾಗದಲ್ಲಿನ ಪಾಲಿಕೆ ಒಣ ತ್ಯಾಜ್ಯ ಸಂಗ್ರಹ ಕೇಂದ್ರಕ್ಕೆ ಶನಿವಾರ ಬೆಳಿಗ್ಗೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದೆ‌.

'ಬೆಳಿಗ್ಗೆ 10.49ರ ವೇಳೆಗೆ ಸ್ಥಳೀಯರೊಬ್ಬರಿಂದ ಬೆಂಕಿ ಅವಘಡದ ಕರೆ ಬಂದಿತು. ಅರ್ಧ ಗಂಟೆಯಿಂದ ಕಾರ್ಯಾಚರಣೆ ನಡೆಸಿದ್ದೇವೆ. ಬೆಂಕಿ ಕಾರಣ ಕುರಿತು ತಿಳಿದುಬಂದಿಲ್ಲ. ಕಾರ್ಯಾಚರಣೆ ನಂತರ ಕಾರಣ ತಿಳಿಯಲಿದೆ' ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು 'ಪ್ರಜಾವಾಣಿ'ಗೆ ತಿಳಿಸಿದರು.

ತಂಡದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದಾರೆ.ಮಾರುಕಟ್ಟೆ, ಸುತ್ತಮುತ್ತಲ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT