ಬುಧವಾರ, ಸೆಪ್ಟೆಂಬರ್ 23, 2020
26 °C

ಮೈಸೂರಿನಲ್ಲಿ ಗೋದಾಮಿಗೆ ಬೆಂಕಿ: ₹ 2 ಲಕ್ಷ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ನಗರದ ದೇವರಾಜ ಮೊಹಲ್ಲಾದ ಶಿವಯ್ಯನ ಮಠದ ರಸ್ತೆಯಲ್ಲಿರುವ ಭಾಗ್ಯ ಪ್ರಾವಿಷನ್‌ ಸ್ಟೋರ್‌ನ ಗೋದಾಮಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಂದಾಜು ₹ 2 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ.

ಭಾಗ್ಯ ಪ್ರಾವಿಷನ್ ಸ್ಟೋರ್‌ನ ಮೇಲ್ಭಾಗದಲ್ಲೇ ಗೋದಾಮು ಇತ್ತು. ಕೆಲ ದಿನಗಳ ಹಿಂದಷ್ಟೇ ಎಲ್ಲವನ್ನೂ ಖಾಲಿ ಮಾಡಿದ್ದರು.

ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನದೊಂದಿಗೆ ಬಂದ ಸಿಬ್ಬಂದಿ, ಒಂದು ಗಂಟೆಗೂ ಹೆಚ್ಚಿನ ಅವಧಿ ಬೆಂಕಿ ನಂದಿಸಲು ಹರ ಸಾಹಸ ನಡೆಸಿದರು. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಕೆನ್ನಾಲಿಗೆ ತಗುಲದಂತೆ ನೋಡಿಕೊಂಡರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.

‘ಅಂಗಡಿ, ಗೋದಾಮು ವೆಂಕಟೇಶ್‌ ಎಂಬುವರಿಗೆ ಸೇರಿದ್ದು. ಬೆಂಕಿ ಹೇಗೆ ತಗುಲಿತು ಎಂಬುದು ಗೊತ್ತಾಗಿಲ್ಲ. ಅಂಗಡಿಯಲ್ಲಿದ್ದ ₹ 50 ಸಾವಿರ ಮೌಲ್ಯದ ವಸ್ತುಗಳು ಸೇರಿದಂತೆ ಕಟ್ಟಡಕ್ಕೂ ಬೆಂಕಿ ಹಾನಿಯನ್ನುಂಟು ಮಾಡಿದೆ. ಕನಿಷ್ಠ ₹ 2 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ದೂರು ನೀಡಿದ್ದಾರೆ’ ಎಂದು ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಪ್ರಸನ್ನಕುಮಾರ್ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.