ಶುಕ್ರವಾರ, ಫೆಬ್ರವರಿ 21, 2020
18 °C

ಕೆ.ಆರ್.ನಗರದಲ್ಲಿ ಬೆಂಕಿ ಅವಘಡ: ಒಂದೇ ಕುಟುಂಬದ ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಒಲೆ ಹೊತ್ತಿಸಲು ಹೋದಾಗ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಲ್ಲಿನ ಕೆ.ಆರ್.ನಗರದ ಈಶ್ವರನಗರ ಬಡಾವಣೆಯಲ್ಲಿ ಗುರುವಾರ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ರೇಣುಕಾ ಸ್ವಾಮಿ(46)ಪತ್ನಿ ಪುಷ್ಪಲತಾ(35) ಹಾಗೂ ಪುತ್ರ ತೇಜಸ್(14) ಎಂಬುವರಿಗೆ ಗಂಭೀರ ಗಾಯಗಳಾಗಿವೆ. ರೇಣುಕಾ ಸ್ವಾಮಿ ಪೊಲೀಸ್ ಇಲಾಖೆಯಲ್ಲಿ ಮುಖ್ಯಪೇದೆಯಾಗಿದ್ದು, ಇವರ ಪತ್ನಿ ಬೆಳಿಗ್ಗೆ ನೀರು ಒಲೆ ಹಚ್ಚುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಗಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು