ಶುಕ್ರವಾರ, ನವೆಂಬರ್ 27, 2020
22 °C

ಬುದ್ಧನಗರದ ನಾಮಫಲಕಕ್ಕೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಮಾನಂದವಾಡಿ ರಸ್ತೆಯ ನೆಲ್ಲೂರು ಶೆಡ್‌ ಬಡಾವಣೆಯಲ್ಲಿ ಅಳವಡಿಸಿದ್ದ ಬುದ್ಧನಗರ ಎಂಬ ನಾಮಫಲಕಕ್ಕೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ್ದಾರೆ.

ಈ ನಾಮಫಲಕದಲ್ಲಿ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನರಾಂ ಅವರ ಭಾವಚಿತ್ರಗಳೂ ಇದ್ದು, ಇವೂ ಹಾನಿಗೀಡಾಗಿವೆ. ಅ. 12ರಂದು ನೆಲ್ಲೂರು ಶೆಡ್‌ ಎಂಬ ನಾಮಫಲಕಕ್ಕೆ ಬದಲಾಗಿ ಬುದ್ಧನಗರ ಎಂಬ ನಾಮಫಲಕವನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬಾಳದಲ್ಲಿ ಕಳ್ಳತನ

ಮೈಸೂರು: ಇಲ್ಲಿನ ಹೆಬ್ಬಾಳದ ಲಕ್ಷ್ಮೀಕಾಂತನಗರದ ನಿವಾಸಿ ಪುನೀತ್‌ ಎಂಬುವವರ ಮನೆಯಲ್ಲಿ ಕಳ್ಳರು ₹ 70 ಸಾವಿರ ನಗದನ್ನು ಕಳವು ಮಾಡಿದ್ದಾರೆ.

ಪುನೀತ್ ಅವರು ನ. 14ರಂದು ಮನೆಗೆ ಬೀಗ ಹಾಕಿಕೊಂಡು ಸಂಸಾರ ಸಮೇತರಾಗಿ ದೀಪಾವಳಿ ಹಬ್ಬಕ್ಕಾಗಿ ಊರಿಗೆ ಹೋಗಿದ್ದರು. ಬುಧವಾರ ಬೆಳಿಗ್ಗೆ ಮನೆಗೆ ಬಂದಾಗ ಡೋರ್‌ಲಾಕ್ ಮುರಿದಿರುವುದು ಗೊತ್ತಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ ₹ 70 ಸಾವಿರ ನಗದು ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.