ಗುರುವಾರ , ಮೇ 6, 2021
31 °C

ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ಫ್ಲೆಕ್ಸ್‌ಗೆ ಬೆಂಕಿ: ನಾಲ್ವರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ತಾಲ್ಲೂಕಿನ ಬೆಳತೂರು ಗ್ರಾಮದಲ್ಲಿ, ಡಾ.ಬಿ.ಆರ್ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಫ್ಲೆಕ್ಸ್‌ಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ
ಹಾನಿ ಮಾಡಿದ್ದಾರೆ.

ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ಅಂಬೇಡ್ಕರ್ ಜನ್ಮದಿನ ಆಚರಿಸಲು ಮಂಗಳವಾರ ರಾತ್ರಿ ತಯಾರಿ ನಡೆಸಿದ್ದರು. ಬೆಂಕಿ ಹಚ್ಚಿರುವುದು ಬುಧವಾರ ನಸುಕಿನಲ್ಲಿ ಗೊತ್ತಾಗಿದೆ.

ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿ ಸ್ವಾಮಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು