ಗುರುವಾರ , ಜನವರಿ 23, 2020
20 °C
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮೈಸೂರು: ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಪರ– ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ ಕುರಿತು ಶುಕ್ರವಾರ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗಿವೆ.

ಫಲಕ ಪ್ರದರ್ಶಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣೆ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಕೆ.ವಸಂತಕುಮಾರ್ ಅವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಇದು ದೇಶದ್ರೋಹ ಮಾತ್ರವಲ್ಲ, ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನ’ ಎಂದು ಖಂಡಿಸಿದ್ದಾರೆ.

ಕಾಶ್ಮೀರಕ್ಕೆ 370ನೇ ವಿಧಿಯನ್ನು ನೀಡುವ ಕುರಿತು ಅಂಬೇಡ್ಕರ್ ವಿರೋಧಿಸಿದ್ದರು. ಅವರೇ ನೀಡಿದ ಸಂವಿಧಾನದ ಅಡಿ, ಸಂಸ‌ತ್ತಿನ ಸಾರ್ವಭೌಮತ್ವದ ಅವಕಾಶದಡಿ ಕೇಂದ್ರ ಸರ್ಕಾರ ಈ ನಿಯಮಗಳನ್ನು ರದ್ದುಪಡಿಸಿತು. ಇದನ್ನು ವಿರೋಧಿಸುವುದು ಸ್ಪಷ್ಟವಾಗಿ ಅಂಬೇಡ್ಕರ್ ಅವರಿಗೆ ಮಾಡುವ ಅವಮಾನ ಎಂದು ಅವರು ಹೇಳಿದ್ದಾರೆ. ಜತೆಗೆ, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ– ಎಐಡಿಎಸ್‌ಒ

‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಫಲಕ ಪ್ರದರ್ಶನವನ್ನು ಖಂಡಿಸಿದೆ. ಮಾತ್ರವಲ್ಲ, ಕಾಶ್ಮೀರ ಭಾರತ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದೆ.

‘ಅಂದಿನ ಪ್ರತಿಭಟನೆಗೂ ಕಾಶ್ಮೀರ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ. ಫಲಕ ಪ್ರದರ್ಶನ ಗಮನಕ್ಕೆ ಬಂದಿಲ್ಲ. ಈ ಘೋಷಣೆಗೆ ನಮ್ಮ ಸಮ್ಮತಿ ಇಲ್ಲ. ಇದರ ಜತೆಗೆ, ವಿದ್ಯಾರ್ಥಿಗಳ ಪ್ರಜಾತಾಂತ್ರಿಕ ಹೋರಾಟಗಳ ಹಕ್ಕನ್ನು ಕಾಪಾಡಬೇಕು’ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು