ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತಪಟ್ಟವರ ಮಕ್ಕಳಿಗೆ ಮೈಸೂರು ವಿ.ವಿ ಉಚಿತ ಸೀಟು

Last Updated 28 ಮೇ 2021, 13:49 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್‌-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.

ಶುಕ್ರವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ವಿಶ್ವವಿದ್ಯಾಲಯದ ಸಂಜೆ ಕಾಲೇಜು, ಲಲಿತಕಲೆಗಳ ಕಾಲೇಜುಗಳಲ್ಲಿ ತಲಾ ಐವರಿಗೆ ಪ್ರವೇಶ ನೀಡಲಾಗುವುದು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರಿನ ಮಾನಸಗಂಗೋತ್ರಿ, ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ಹಾಗೂ ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಗಳಲ್ಲಿ ತಲಾ ಮೂವರು ವಿದ್ಯಾರ್ಥಿಗಳಿಗೆಉಚಿತವಾಗಿ ಪ್ರವೇಶ ನೀಡಲಾಗುವುದು.

ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದರೆ ಮೆರಿಟ್‌ ಮೇರೆಗೆ ಆಯ್ಕೆ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT