ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ನಮಾಜ್‌ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಿ: ಪ್ರತಾಪಸಿಂಹ

Last Updated 25 ಆಗಸ್ಟ್ 2021, 11:36 IST
ಅಕ್ಷರ ಗಾತ್ರ

ಮೈಸೂರು: ‘ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್‌, ಚರ್ಚ್‌ಗಳಲ್ಲಿ ಭಾನುವಾರ ಪ್ರಾರ್ಥನೆ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಬೇಕು’ ಎಂದು ಸಂಸದ ಪ್ರತಾಪಸಿಂಹ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಆಚರಣೆಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಭರವಸೆ ಇದೆ’ ಎಂದರು.

‘ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ನಾನು ಹೇಳುತ್ತಿಲ್ಲ. ಕೊರೊನಾ ಮೂರನೇ ಅಲೆಯ ಭಯವಿದೆ. ಹೀಗಾಗಿ, ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡು ಆಚರಿಸಲು ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT