ಗುರುವಾರ , ಆಗಸ್ಟ್ 5, 2021
23 °C

ಎಚ್.ಡಿ.ಕೋಟೆ: ನೀರಿನ ತೊಟ್ಟಿಗೆ ಬಿದ್ದ ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಚ್.ಡಿ.ಕೋಟೆ: ತಾಲ್ಲೂಕಿನ ಮೊತ್ತ ಗ್ರಾಮದಲ್ಲಿ ನಿರ್ಮಾಣದ ಹಂತದಲ್ಲಿದ್ದ ಮನೆ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ.

ಮೊತ್ತ ಹಾಡಿಯ ಜೇನುಕುರುಬ ಮಹೇಶ್‌ಕುಮಾರ್ ಪುತ್ರಿ ಛಾಯಾ (2) ಮೃತ ಬಾಲಕಿ.

ಆಟ ಆಡುತ್ತಿದ್ದ ಸಂದರ್ಭದಲ್ಲಿ ಗ್ರಾಮದ ಶಿವಲಿಂಗೇಗೌಡರಿಗೆ ಸೇರಿದ ಮನೆ ಮುಂದೆ ನಿರ್ಮಾಣ ಮಾಡಿದ ನೀರಿನ ತೊಟ್ಟಿಗೆ ಬಿದ್ದಿದೆ. ಅಕ್ಕ ಪಕ್ಕದಲ್ಲಿ ಯಾರೂ ಇಲ್ಲದ್ದರಿಂದ ಯಾರ ಗಮನಕ್ಕೂ ಬಂದಿಲ್ಲ. ತದ ನಂತರ ಸ್ವಲ್ಪ ಹೊತ್ತಿನಲ್ಲಿ ನೀರಿನಲ್ಲಿ ತೇಲುತ್ತಿದ್ದ ಮಗು ಕಣ್ಣಿಗೆ ಬಿದ್ದಿದೆ.
ಮನೆ ಮಾಲೀಕರ ನಿರ್ಲಕ್ಷ್ಯಕ್ಕೆ ಮಗ ಬಲಿಯಾಗಿದೆ ಎಂದು ಮೊತ್ತ ಹಾಡಿಯ ಆದಿವಾಸಿ ಗಿರಿಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆ ಮಾಲೀಕರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.