ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ: ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ

Last Updated 18 ಅಕ್ಟೋಬರ್ 2021, 10:03 IST
ಅಕ್ಷರ ಗಾತ್ರ

ಮೈಸೂರು: ‘ದಸರಾ ನಂದಿ ಧ್ವಜ ಕಂಬ ತಯಾರಿಸುವ ಯೋಗೇಶ್‌ ಶಿಲ್ಪಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ರಾಜ್ಯಾಧ್ಯಕ್ಷ ಗಿರೀಶ್‌ ಶಿವಾರ್ಚಕ ಆಗ್ರಹಿಸಿದರು.

‘ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಂದಿ ಧ್ವಜ ಕಂಬ ತಯಾರಿಕೆಯಲ್ಲಿ ಕಳೆದ 55 ವರ್ಷಗಳಿಂದ ತೊಡಗಿಸಿಕೊಂಡಿದ್ದರೂ ಯೋಗೇಶ್‌ ಅವರ ಸೇವೆಯನ್ನು ಸರ್ಕಾರ ಪರಿಗಣಿಸಿಲ್ಲ. ಅರ್ಹ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಖಾಸಗಿ ದಸರಾ ಆಚರಿಸಿ ಪರಂಪರೆಯ ಮುಂದುವರಿಕೆಗೆ ಕಾರಣರಾದ ಕನ್ನಡ ಕ್ರಾಂತಿದಳ ಸಂಸ್ಥಾಪಕ ನಾ.ನಾಗಲಿಂಗಸ್ವಾಮಿ ಕುಟುಂಬವನ್ನು ಎಲ್ಲ ದಸರೆಯಲ್ಲೂಜಿಲ್ಲಾಡಳಿತವು ವಿಶೇಷವಾಗಿ ಆಹ್ವಾನ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.

‘ಕೋವಿಡ್‌ ಸಂದರ್ಭದಲ್ಲಿ ಕಲಾವಿದರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಭರವಸೆಯನ್ನಷ್ಟೇ ನೀಡಿದೆ. ಪ್ರಶಸ್ತಿ ಆಯ್ಕೆಯಲ್ಲೂ ಅರ್ಹರನ್ನು ಪರಿಗಣಿಸುತ್ತಿಲ್ಲ’ ಎಂದು ಸಂಘಟನೆಯ ಮುಖಂಡ ಸೋಮಶೇಖರ್‌ ಬೇಸರ ವ್ಯಕ್ತಪಡಿಸಿದರು.

ಸಂಘಟನೆಯ ಪ್ರಕಾಶ್‌ಗೌಡ, ಲೋಕೇಶ್‌, ಚೇತನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT