ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಮಹೋತ್ಸವ: ಸಿಂಹಾಸನ ವೀಕ್ಷಣೆಗೆ ಅವಕಾಶ

Last Updated 25 ಸೆಪ್ಟೆಂಬರ್ 2020, 1:49 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

‌ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸಿಂಹಾಸನದ ಜೋಡಣೆ ನಡೆಯುತ್ತದೆ. ಈ ಬಾರಿ ಅಧಿಕ ಮಾಸದ ಕಾರಣ ಒಂದು ತಿಂಗಳು ಮುಂಚಿತವಾಗಿಯೇ ಜೋಡಣೆ ನಡೆದಿದೆ.

ಅರಮನೆ ಪ್ರವೇಶಕ್ಕೆ ₹ 70 (ವಯಸ್ಕರು), ಮಕ್ಕಳಿಗೆ ₹ 35 ವಿಧಿಸಿದರೆ ಸಿಂಹಾಸನ ವೀಕ್ಷಣೆಗೆ ₹ 50 ಶುಲ್ಕ ವಿಧಿಸಲಾಗುತ್ತದೆ ಎಂದು ಅರಮನೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಖಜಾನೆಯಲ್ಲಿದ್ದ ಈ ಸಿಂಹಾಸನವನ್ನು ದರ್ಬಾರ್‌ ಹಾಲ್‌ನಲ್ಲಿ ಜೋಡಿಸಿಡಲಾಗಿದೆ. ಛಾಯಾಚಿತ್ರ, ವಿಡಿಯೊ ತೆಗೆಯುವುದನ್ನು ನಿಷೇಧಿಸಲಾಗಿದೆ. ಈ ಬಾರಿ ದಸರಾ ಉತ್ಸವ ಅ.17 ರಂದು ಆರಂಭವಾಗಿ, ಅ.26 ರಂದು ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT