ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ಶಿಕ್ಷೆ ನೀಡುತ್ತಿರುವ ಸರ್ಕಾರ: ಲಕ್ಷ್ಮಣ ಕಿಡಿ

ವಿಶೇಷ ಪ್ಯಾಕೇಜ್ ಹಾಗೂ ಸೂಕ್ತ ಸೌಲಭ್ಯ ನೀಡಲು ಒತ್ತಾಯ
Last Updated 5 ಸೆಪ್ಟೆಂಬರ್ 2020, 13:31 IST
ಅಕ್ಷರ ಗಾತ್ರ

ಮೈಸೂರು: ಸರ್ಕಾರವು ಕೊರೊನಾ ಸಂಕಷ್ಟದಲ್ಲಿ ಪರದಾಡುತ್ತಿರುವ ಶಿಕ್ಷಕರಿಗೆ ಸೂಕ್ತ ಸೌಲಭ್ಯ ನೀಡದೇ ಶಿಕ್ಷೆ ನೀಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಬೇಸರ ವ್ಯಕ್ತಪಡಿಸಿದರು.

ಅನೇಕ ಖಾಸಗಿ ಶಾಲಾ ಶಿಕ್ಷಕರು ಕೋವಿಡ್ ಸಂದರ್ಭದಲ್ಲಿ ಸಂಬಳ ಇಲ್ಲದೇ ಪರಿತಪಿಸುತ್ತಿದ್ದಾರೆ. ಇವರ ನೆರವಿಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು, ಖಾಸಗಿ ಶಾಲೆಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಶಿಕ್ಷಕರನ್ನು ಜನಗಣತಿ, ಕೊರೊನಾ ಹಾಗೂ ಇನ್ನಿತರ ಕಲಸಕ್ಕೆ ನಿಯೋಜನೆ ಮಾಡಲಾಗಿದೆ. ಇವರಿಗೆ ಸೂಕ್ತ ಪ್ರತಿಫಲ ಸಿಗಬೇಕು ಎಂದು ಅವರು ಆಗ್ರಹಿಸಿದರು.

ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನೇಕ ಸವಲತ್ತುಗಳನ್ನು ಶಿಕ್ಷಕರಿಗೆ ನೀಡಿತು. ಆದರೆ, ಈಗಿನ ಬಿಜೆಪಿ ಸರ್ಕಾರ ಶಿಕ್ಷಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಅವರು ಕಿಡಿಕಾರಿದರು.

ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಗಳೂ ಶಿಕ್ಷಕರ ಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅತಿಥಿ ಉಪನ್ಯಾಸಕರು ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಅವರ ಕೂಗನ್ನು ಸರ್ಕಾರ ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಬಿಸಿಯೂಟವನ್ನು ಮಕ್ಕಳ ಮನೆಗೆ ತಲುಪಿಸುವ ಕೆಲಸ ಆಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿರುವ ಖಾಸಗಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳನ್ನೇ ಅವಲಂಬಿಸಿರುವ ಸ್ವಚ್ಛತಾ ಕಾರ್ಮಿಕರು, ವಾಹನ ಚಾಲಕರಿಗೆ ಪರಿಹಾರ ನೀಡಬೇಕು ಎಂದರು.

ಮುಖಂಡರಾದ ಹೆಡತಲೆ ಮಂಜುನಾಥ್, ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT