ಭಾನುವಾರ, ಮಾರ್ಚ್ 7, 2021
32 °C
ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಮತ್ತು ಸನ್ಮಾನ ಸಮಾರಂಭ

ಸಮಾನತೆಯನ್ನು ಸ್ಥಾಪಿಸುವುದೇ ಸರ್ಕಾರದ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮೈಸೂರು: ಯುವಜನತೆಯನ್ನು ಬಲಪಡಿಸಿದರೆ ಈ ದೇಶದ ಭವಿಷ್ಯ ಉಜ್ವಲಗೊಳ್ಳುವುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಸಲಹೆ ನೀಡಿದರು.‌

ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರದ ಕಾರ್ಯಕ್ಷಮತೆ ಸಮತೋಲಿತವಾಗಿರಬೇಕು ಎಂದು ಡಾ.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ತಿಳಿಸಿದ್ದಾರೆ. ಅದರಂತೆ ಸರ್ಕಾರಗಳು ಕೆಲಸ ಮಾಡಬೇಕು. ಎಲ್ಲರನ್ನೂ ಸಮಾನವಾಗಿ ಕಾಣುವುದೇ ಸರ್ಕಾರ. ಅದರಲ್ಲೂ ಯುವಕರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿ ದೇಶ ಬೆಳೆಸುವ ಕಾರ್ಯಕ್ಕೆ ಮುನ್ನುಡಿ ಹಾಕಬೇಕು. ಹಾಗಾಗಿ, ಪ್ರಜೆಗಳಲ್ಲಿ ಜಾಗೃತಿ ಮೂಡಿಸಿ ಸರ್ಕಾರವನ್ನು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮಾಡಲು ನಾವೆಲ್ಲಾ ಶ್ರಮಪಡಬೇಕು’ ಎಂದರು.

ಯುವಜನತೆಯಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ಗ್ರಾಮಾಂತರ ಪ್ರದೇಶಗಳ ವಿದ್ಯಾರ್ಥಿಗಳಲ್ಲಿ ಅಳುಕಿರುತ್ತದೆ. ಶಿಕ್ಷಣ ಅಡಿಪಾಯ ಅವರಿಗೆ ಸಿಕ್ಕಿರುವುದಿಲ್ಲ. ಆದರೆ, ಗ್ರಾಮಾಂತರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದರೆ ಅವರು ಎಂತಹ ಸಾಧನೆಯನ್ನಾದರೂ ಮಾಡಬಲ್ಲರು ಎಂದು ಅವರು ತಮ್ಮ ಸಾಧನೆಯ ಮಾರ್ಗವನ್ನು ಉಲ್ಲೇಖಿಸಿ ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಸುರೇಶ್ ಕೆ.ವೆಂಟಿಗೋಡಿ, ಮಂಡ್ಯದ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಎಚ್.ಇ.ಚಿಣ್ಣಪ್ಪ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಗೌರವ ಕಾರ್ಯದರ್ಶಿ ಎಚ್.ಕೆ.ಶ್ರೀನಾಥ್ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು