31ರಂದು ಆಸ್ಪತ್ರೆ ಕಟ್ಟಡಕ್ಕೆ ಚಾಲನೆ

7
₹25 ಕೋಟಿ ವೆಚ್ಚದಲ್ಲಿ ಕಾಮಗಾರಿ, 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ

31ರಂದು ಆಸ್ಪತ್ರೆ ಕಟ್ಟಡಕ್ಕೆ ಚಾಲನೆ

Published:
Updated:
Prajavani

ಹುಣಸೂರು: ದೇವರಾಜ ಅರಸು ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜ.31ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಎಚ್‌.ವಿಶ್ವನಾಥ್ ಹೇಳಿದರು.

ಕಾರ್ಯಕ್ರಮದ ಬಳಿಕ ಗಿರಿಜನ ರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಲಿದ್ದಾರೆ. ಈಗಿರುವ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲಾಗುತ್ತದೆ. 4 ಎಕರೆ ವಿಸ್ತೀರ್ಣದಲ್ಲಿ ₹25 ಕೋಟಿ ವೆಚ್ಚದಲ್ಲಿ ಕಟ್ಟಡ ತಲೆ ಎತ್ತಲಿದೆ. ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೆಪಿಟಿಸಿಎಲ್‌ ವತಿಯಿಂದ ₹50 ಕೋಟಿ ವೆಚ್ಚದಲ್ಲಿ 220 ಕಿಲೋವಾಟ್‌ ಸಾಮರ್ಥ್ಯದ ಸ್ಟೇಷನ್‌ ಮತ್ತು 6 ಹೋಬಳಿ ಮಟ್ಟದಲ್ಲಿ ವಿದ್ಯುತ್
ವಿತರಣಾ ಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 500 ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ಜ.23ರಂದು ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಾಲ್ಲೂಕಿನಲ್ಲಿ ವಿವಿಧ ಯೋಜನೆಗಳಿಗೆ ₹100 ಕೋಟಿ ಅನುದಾನ ಬಿಡುಗಡೆಯಾಗಿದೆ. ಹುಣಸೂರು ಉಪವಿಭಾಗಕ್ಕೆ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಯನ್ನು ಮಂಜೂರು ಮಾಡುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಈ ಕಚೇರಿ ವ್ಯಾಪ್ತಿಗೆ ಮಡಿಕೇರಿ ಸೇರಿದಂತೆ ಹುಣಸೂರು ಉಪವಿಭಾಗದ 4 ತಾಲ್ಲೂಕುಗಳ ಡಿಪೊಗಳು ಸೇರಲಿವೆ ಎಂದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೆಟ್ಟಹಳ್ಳಿ ಗ್ರಾಮದಲ್ಲಿ 10 ಎಕರೆ ಜಾಗವನ್ನು ಗುರುತಿಸಿದ್ದು, ಅದನ್ನು ಕಂದಾಯ ಇಲಾಖೆಯು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದೆ. ಈ ಯೋಜನೆಗೆ ಅನುದಾನ ಬಿಡುಗಡೆಗೊಂಡ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಎಚ್.ವೈ.ಮಹದೇವ್‌, ಸದಸ್ಯ ಶಿವಕುಮಾರ್‌, ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಮಾದೇಗೌಡ, ಜಿ.ಪಂ ಮಾಜಿ ಸದಸ್ಯ ಫಜಲುಲ್ಲಾ ಉಪಸ್ಥಿತರಿದ್ದರು.

 

ನಗರಸಭೆಗೆ ₹5 ಕೋಟಿ ಬಿಡುಗಡೆ

ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ ನಗರಸಭೆಗೆ ₹10 ಕೋಟಿ ಘೋಷಿಸಿದ್ದು, ಮೊದಲ ಹಂತದಲ್ಲಿ ₹5 ಕೋಟಿ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ನಗರದ ವಿವಿಧ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತದೆ. ಇದನ್ನು ವಾರ್ಡ್‌ಗಳ ಸದಸ್ಯರು ಹಂಚಿಕೊಳ್ಳುವುದಕ್ಕೆ ಬ್ರೇಕ್‌ ಹಾಕಿದ್ದೇನೆ ಎಂದು ಎಚ್‌.ವಿಶ್ವನಾಥ್‌ ತಿಳಿಸಿದರು.

 

ಬಿಹಾರ ರಾಜಕಾರಣಕ್ಕೆ ಹೋಲಿಸುವ ಪರಿಸ್ಥಿತಿ: ಬೇಸರ

ರಾಜ್ಯ ರಾಜಕಾರಣವನ್ನು ಬಿಹಾರ ರಾಜಕಾರಣಕ್ಕೆ ಹೋಲಿಸುವ ಪರಿಸ್ಥಿತಿ ಬಂದಿದೆ ಎಂದು ಎಚ್‌.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ತಂತ್ರಗಾರಿಕೆ ಸರಿಯಲ್ಲ. ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡುವುದನ್ನು ಬಿಟ್ಟು ವಾಮಮಾರ್ಗ ಹಿಡಿದಿರುವುದು ದುರಂತ ಎಂದರು.

ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಮೈತ್ರಿ ಸರ್ಕಾರವನ್ನು ಉರುಳಿಸಲು ಮುಂದಾಗಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !