ಮೈಸೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮಾಂತರ ಕಾರ್ಯಕರ್ತರೊಂದಿಗೆ ನಗರ ಬಿಜೆಪಿ ಅಧ್ಯಕ್ಷರು ಜೊತೆಗೂಡಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಲು ಪ್ರಯತ್ನ ಹಾಕಬೇಕು ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮೈಸೂರು ನಗರ ಬಿಜೆಪಿ ಪ್ರಥಮ ಕಾರ್ಯಕಾರಿಣಿ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಮಾಡಬೇಕಿದೆ ಎಂದರು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಧೃತಿಗೆಡದೆ ಎಲ್ಲಾ ಸವಾಲುಗಳನ್ನು ಎದುರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದದ ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಅನುಸರಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಜನರಲ್ಲೂ ಜಾಗೃತಿ ಮೂಡಿಸೋಣ ಎಂದರು.

ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್, ಉಸ್ತುವಾರಿಗಳಾದ ಹಿರೇಂದ್ರ ಷಾ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಸತೀಶ್ ಚಂದ್ರ, ಬಿ.ಪಿ.ಮಂಜು ನಾಥ್, ಅನಿಲ್ ಥಾಮಸ್, ಪಾಲಿಕೆ ವಿರೋಧ ಪಕ್ಷದ ನಾಯಕ ಸುಬ್ಬಯ್ಯ, ಹೇಮಗಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್ ಕುಮಾರ್, ಸೋಮ ಸುಂದರ್, ಗಿರಿಧರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.