ಶುಕ್ರವಾರ, ಅಕ್ಟೋಬರ್ 30, 2020
27 °C

ಬಾಕಿ ವೇತನ ಪಾವತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಬಾಕಿ ವೇತನ ಪಾವತಿ, ಬಡ್ತಿ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜತೆ ಸಂಯೋಜಿತಗೊಂಡ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಪ್‌ ಆಪರೇಟರ್‌ಗಳಿಗೆ ಅರ್ಧ ಸಂಬಳ ನೀಡುವ ಪ್ರಸ್ತಾವವನ್ನು ಕೈಬಿಡಬೇಕು, ಅವರಿಗೆ ಬಡ್ತಿ ನೀಡಬೇಕು, ಎಲ್ಲ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ನೀಡಬೇಕು ಎಂದು ಮನವಿ ಮಾಡಿದರು.

ಎಲ್ಲ ಸಿಬ್ಬಂದಿಯ ವೇತನಕ್ಕಾಗಿ ಕೊರತೆ ಇರುವ ₹ 382 ಕೋಟಿಯನ್ನು ಬೇರೆ ಬೇರೆ ಯೋಜನೆಗಳಿಂದ ಹಣ ಸಂಗ್ರಹಿಸಿ ಮಂಜೂರಾತಿ ನೀಡಬೇಕು, ಕಂಪ್ಯೂಟರ್ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

14 ಮತ್ತು 15ನೇ ಹಣಕಾಸು ಆಯೋಗದ ಹಣದಲ್ಲಿ ಬಾಕಿ ಉಳಿದ ಸಿಬ್ಬಂದಿಗೆ ವೇತನ ನೀಡಬೇಕು, ನಿವೃತ್ತಿಯಾದವರಿಗೆ 15 ತಿಂಗಳ ಗ್ರಾಚ್ಯೂಟಿ ನೀಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಅಧ್ಯಕ್ಷ ಕೆ.ಬಸವರಾಜು, ಖಜಾಂಚಿ ವರುಣ ನಾಗರಾಜ್ ಹಾಗೂ ಕಾರ್ಯದರ್ಶಿ ಲೋಕೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.