ಗುರುವಾರ , ಫೆಬ್ರವರಿ 25, 2021
25 °C
4ನೇ ತಾಲ್ಲೂಕು ಸಮ್ಮೇಳನಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಜ್ಜು

ಎಚ್‌.ಡಿ.ಕೋಟೆಯಲ್ಲಿ ಕನ್ನಡ ಕಲರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಎ‌ಚ್.ಡಿ.ಕೋಟೆ:  ತಾಲ್ಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಿದ್ಧಗೊಂಡಿದ್ದು, ಜಯಚಾಮರಾಜೇಂದ್ರ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ. ವೇದಿಕೆಗೆ ದಿ.ಎಚ್.ಬಿ.ಲಿಂಗಣ್ಣಯ್ಯ ವೇದಿಕೆ ಎಂದು ನಾಮಕರಣ ಮಾಡಲಾಗಿದೆ.

ಡಿ. 7 ರಂದು ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ತಹಶೀಲ್ದಾರ್ ಎಂ.ಮಂಜುನಾಥ್ ನಾಡ ಧ್ವಜಾರೋಹಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಡ ಪ್ರಮೋದ್ ಪರಿಷತ್‌ನ ಧ್ವಜಾರೋಹಣ ಮಾಡಲಿದ್ದಾರೆ.

8.30ಕ್ಕೆ ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಯಲ್ಲಿ  ವೇದಿಕೆಗೆ ಕರೆದುಕೊಂಡ ಹೋಗಲಾಗುವುದು. ವರದರಾಜಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭವಾಗುವ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ ಚಾಲನೆ ನೀಡಲಿದ್ದಾರೆ.

ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರವಿಕುಮಾರ್, ಸರಗೂರು ತಾಲ್ಲೂಕಿನ ತಹಶೀಲ್ದಾರ್ ಪ್ರಸನ್ನಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ದರ್ಶನ್, ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಆರ್.ವಿಜಯಕುಮಾರ್ ಪಾಲ್ಗೊಳ್ಳುವರು.

11 ಗಂಟೆಗೆ ಸಚಿವ ಸಾ.ರಾ. ಮಹೇಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದ ಆರ್. ಧ್ರುವನಾರಾಯಣ್ ಸಾಂಸೃತಿಕ ಕಾರ್ಯಕ್ರಮವನ್ನು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾಸುಲ್ತಾನ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಹಿತಿ ಕ್ಷೀರಸಾಗರ್ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವುರು.

ಹಿರಿಯ ವಿದ್ವಾಂಸ ಮಲೆಯೂರು ಗುರುಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನಾ,  ವೈ.ಡಿ.ರಾಜಣ್ಣ ಇತರರು ಉಪಸ್ಥಿತರಿರುತ್ತಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.