ಬುಧವಾರ, ಸೆಪ್ಟೆಂಬರ್ 22, 2021
28 °C
ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ಮುಡಿ ಸೇವೆ ರದ್ದು

ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಸ್ನಾನಘಟ್ಟದ ಬಳಿಯ ಐತಿಹಾಸಿಕ ಹದಿನಾರು ಕಲ್ಲು ಮಂಟಪ ಹಾಗೂ ಸೋಪಾನ ಕಟ್ಟೆಗಳು ಮುಳುಗಿವೆ.

ತಾಲ್ಲೂಕಿನ ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ ನಗರದ ಹಳ್ಳದಕೇರಿ, ಕುರಬಗೇರಿ, ಗೌರಿ ಘಟ್ಟ, ತೋಪಿನ ಬೀದಿಯ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಂಭವವಿದೆ. ನದಿಯಲ್ಲಿ ಪ್ರವಾಹ ಹೆಚ್ಚಾದರೆ, ತಗ್ಗು ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಮುಂದಾಗಿದೆ.

‘ಕೇರಳದ ವೈನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ 30 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು’ ಎಂದು ತಹಶೀಲ್ದಾರ್ ಮೋಹನ ಕುಮಾರಿ ತಿಳಿಸಿದರು.

ಮುಡಿ ಸೇವೆ ರದ್ದು: ‘ಕಪಿಲಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಸ್ನಾನ ಘಟ್ಟದಲ್ಲಿ ಸ್ನಾನ ಮಾಡುವುದನ್ನು ನಿರ್ಬಂಧಿಸಲಾಗಿದೆ. ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ನಡೆಸಲಾಗುತ್ತಿದ್ದ ಮುಡಿ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ’ ಎಂದು ದೇವಾಲಯದ ಇಒ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು