ಮಂಗಳವಾರ, ಜೂನ್ 22, 2021
28 °C
ಮೈಸೂರು

ಮೈಮುಲ್ ನೇಮಕಾತಿ: ಪಟ್ಟಿ ಪ್ರಕಟಿಸಿದರೆ ನ್ಯಾಯಾಂಗ ನಿಂದನೆ–ಶಾಸಕ ಸಾ.ರಾ.ಮಹೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಸಾ.ರಾ.ಮಹೇಶ್‌

ಮೈಸೂರು: ‘ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟದಲ್ಲಿ (ಮೈಮುಲ್‌) ನಡೆದಿರುವ ನೇಮಕಾತಿ ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಬಾರದು ಎಂದು ಹೈಕೋರ್ಟ್‌ ಆ.13ರಂದು ಮಧ್ಯಂತರ ತೀರ್ಪು ನೀಡಿದೆ’ ಎಂದು ಶಾಸಕ ಸಾ.ರಾ.ಮಹೇಶ್‌ ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹೈಕೋರ್ಟ್‌ನ ಮಧ್ಯಂತರ ತೀರ್ಪು ಉಲ್ಲಂಘಿಸಿ ಮೈಮುಲ್ ಆಡಳಿತ ಮಂಡಳಿ ಸಭೆ ನಡೆಸಲಿದೆ. ಈ ಸಭೆಯ ಅಜೆಂಡಾದಲ್ಲಿ ನೇಮಕಾತಿ ವಿಷಯವನ್ನು ಅಡಕಗೊಳಿಸಿದೆ. ಒಂದು ವೇಳೆ ಅಂತಿಮ ಪಟ್ಟಿ ಪ್ರಕಟಿಸಿದರೆ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇವೆ’ ಎಂದು ಅವರು ಹೇಳಿದರು.

‘ಸೆ.13ಕ್ಕೆ ಈಗಿನ ಆಡಳಿತ ಮಂಡಳಿಯ ಅಧಿಕಾರದ ಅವಧಿ ಮುಗಿಯಲಿದೆ. ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆ ನಡೆದಿದೆ. ಈಗಲೂ ನಿಮಗೆ ಅನ್ಯಾಯ ಆಗಬಾರದು ಎಂದೇ ಮನವಿ ಮಾಡಿಕೊಳ್ಳುತ್ತಿರೋದು. ಯಾವ ಕಾರಣಕ್ಕೂ ನೇಮಕಾತಿಗಾಗಿ ನಿಮ್ಮೊಳಗಿನ ಮಾತುಕತೆಯಂತೆ ಹಣ ಕೊಡಬೇಡಿ’ ಎಂದು ಶಾಸಕ ಸಾ.ರಾ.ಮಹೇಶ್‌ ಉದ್ಯೋಗಾಕಾಂಕ್ಷಿಗಳಲ್ಲಿ ಮನವಿ ಮಾಡಿದರು.

‘ಶಾಸಕರಿಬ್ಬರು ದೂರು ನೀಡಿದ್ದೇವೆ. ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಿಸಿದ್ದೇವೆ. ಆದರೂ ಯಾರ ಒತ್ತಡಕ್ಕೆ ಮಣಿದು ನೇಮಕಾತಿ ಪ್ರಕ್ರಿಯೆ ಅಂತಿಮಗೊಳಿಸಲಾಗುತ್ತಿದೆ ಎಂಬುದನ್ನು ಸಹಕಾರ ಸಚಿವರು ಬಹಿರಂಗಪಡಿಸಬೇಕು. ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ನೇಮಕಾತಿ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ರಾಜ್ಯಪಾಲರು, ಮುಖ್ಯಮಂತ್ರಿ, ಸಹಕಾರ ಸಚಿವರಿಗೆ ಶಾಸಕರೇ ಖುದ್ದು ದೂರು ಸಲ್ಲಿಸಿದ್ದೇವೆ. ಅಕ್ರಮದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಬದಲು ನೇಮಕಾತಿಗೆ ಸಾಥ್ ನೀಡಲಾಗುತ್ತಿದೆ. ಇದನ್ನು ಗಮನಿಸಿದರೆ ಮೈಮುಲ್‌ನ ನೇಮಕಾತಿ ಅಕ್ರಮದಲ್ಲಿ ಸರ್ಕಾರದ ಪ್ರತಿನಿಧಿಗಳ ಪಾಲುದಾರಿಕೆಯೂ ಸಾಬೀತಾದಂತಾಗಿದೆ’ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು