ನೇಣು ಹಾಕಿಕೊಂಡು ಹೆಡ್‌ಕಾನ್‌ಸ್ಟೆಬಲ್ ಸಾವು
ಮೈಸೂರು: ಮಕ್ಕಳಾಗಲಿಲ್ಲವೆಂಬ ಕೊರಗಿನಿಂದಲೇ ನಗರದ ವಿದ್ಯಾರಣ್ಯಪುರಂನ ಮನೆಯೊಂದರಲ್ಲಿ ಹೆಡ್‌ಕಾನ್‌ಸ್ಟೆಬಲ್ ಒಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಮಹೇಶ್ (39) ಆತ್ಮಹತ್ಯೆ ಮಾಡಿಕೊಂಡವರು.
ಮಕ್ಕಳಾಗಲಿಲ್ಲ ಎಂದು ಕೊರಗುತ್ತಿದ್ದ ಮಹೇಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಗುರುವಾರ ರಾತ್ರಿ ವಿದ್ಯಾರಣ್ಯಪುರಂನಲ್ಲಿನ ತನ್ನ ತಾಯಿ ಮನೆಗೆ ಬಂದಿದ್ದರು. ಮಹಡಿ ಮೇಲಿನ ಕೊಠಡಿಯಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ವಿದ್ಯಾರಣ್ಯಪುರಂ ಪೊಲೀಸರು ತಿಳಿಸಿದ್ದಾರೆ.
ಮಹೇಶ್ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸದಲ್ಲಿದ್ದಾಗಲೇ ಅಕಾಲಿಕ ಮರಣಕ್ಕೀಡಾಗಿದ್ದರು. ಅನುಕಂಪದ ಆಧಾರದ ಮೇಲೆ ಇಲಾಖೆಯಲ್ಲಿ ಮಹೇಶ್ ಕೆಲಸ ಪಡೆದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.