ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರೋಗ್ಯ ಇಲಾಖೆ ಅರೆಕಾಲಿಕ ಸಿಬ್ಬಂದಿ ಪ್ರತಿಭಟನೆ

Last Updated 4 ಅಕ್ಟೋಬರ್ 2020, 3:09 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ವೈದ್ಯಕೀಯ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ತಾಲ್ಲೂಕು ಆಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕ್ಷಯರೋಗ ಮೇಲ್ವಿಚಾರಕ ಅಶೋಕ್ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲೂ ಕೂಡ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಹಲವಾರು ವರ್ಷಗಳ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗಳು ಮಾಡುತ್ತಿದ್ದಾರೆ. ಆದರೆ ಈ ಬೇಡಿಕೆಗಳನ್ನು ಈಡೇರಿಸುವಲ್ಲಿ ಯಾವುದೇ ಸರ್ಕಾರದ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ’ ಎಂದು ದೂರಿದರು.

10 ದಿನಗಳಿಂದ ಕರ್ತವ್ಯವನ್ನು ಸ್ಥಗಿತಗೊಳಿಸಿ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಯಾಗಬೇಕು, ಗುತ್ತಿಗೆ ಹೊರ ಗುತ್ತಿಗೆ ನೌಕರರಿಗೆ ಆಗುತ್ತಿರುವ ಮಲತಾಯಿ ಧೋರಣೆಯನ್ನು ನಿಲ್ಲಿಸಿ ನಮಗೂ ಸಮಾನತೆಯನ್ನು ಕಲ್ಪಿಸ ಬೇಕು ಇದರೊಂದಿಗೆ ನಮಗೆ ಭದ್ರತೆ ನೀಡಿ ಸೇವಾ ಕಾಯಂಗೊಳಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದರು.

ಕಂದಾಯ ಇಲಾಖೆಯ ಶಿರಸ್ತೇದಾರ್ ಶಕೀಲಾ ಬಾನು ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಶರತ್, ಡಾ.ಅರ್ಚನಾ, ಸಿಬ್ಬಂದಿ ಹೇಮಾ, ರೂಪಾ, ಪ್ರವೀನ್, ಮಧು, ಕಿರಣ್, ಪುಷ್ಪಲತಾ, ರೇಖಾ, ವನಜಾಕ್ಷಿ, ಮಮತಾ, ಕಲಾವತಿ, ಕಾವ್ಯಾ, ಕಲ್ಪನಾ, ಫಾತಿಮಾ, ಉಮೇಶ್, ಸುಮತಿ ಸೇರಿದಂತೆ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT