ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಮುಂದುವರಿದ ಭಾರಿ ಮಳೆ: 30ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರು

Last Updated 26 ಅಕ್ಟೋಬರ್ 2021, 5:02 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಧಾರಾಕಾರ ಮಳೆ ಮುಂದುವರಿದೆ. ಮಂಗಳವಾರ ನಸುಕಿನಲ್ಲಿ ಸುರಿದ ಮಳೆಗೆ 4 ಕಡೆ ಮರಗಳು ಉರುಳಿ ಬಿದ್ದಿದ್ದರೆ, 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ‌.

ಕೃಷ್ಣಮೂರ್ತಿಪುರಂ, ಚಾಮುಂಡಿಪುರಂ, ಸರಸ್ವತಿಪುರಂ ಹಾಗೂ ಮಿನಿ ವಿಧಾನಸೌಧದ ಎದುರು ಮರಗಳು ಉರುಳಿವೆ. ಜೆ.ಸಿ.ಬಡಾವಣೆ, ಕೆ.ಸಿ.ಬಡಾವಣೆ, ಜಯನಗರ, ಚಿನ್ನಗಿರಿಕೊಪ್ಪಲು ಬಡಾವಣೆಗಳಲ್ಲಿನ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ‌. ಪಾಲಿಕೆಯ 3 ಅಭಯ್ ರಕ್ಷಣಾ ತಂಡಗಳು ರಕ್ಷಣಾ ಕಾರ್ಯ ನಡೆಸಿವೆ‌. ಜೆ.ಸಿ.ನಗರದ 3 ನೇ ಕ್ರಾಸ್ ನಲ್ಲಿ ಚರಂಡಿಯಲ್ಲಿ ಸಿಲುಕಿದ್ದ ಕರುವನ್ನು ರಕ್ಷಣಾ ತಂಡ ರಕ್ಷಿಸಿದೆ.

ನಸುಕಿನ 2 ಗಂಟೆಯ ಬಳಿಕ ನಗರದಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT