ಶುಕ್ರವಾರ, ಡಿಸೆಂಬರ್ 3, 2021
20 °C

ಮೈಸೂರಿನಲ್ಲಿ ಭಾರಿ ಮಳೆ; ಚಾಮುಂಡಿಬೆಟ್ಟದಲ್ಲಿ ಭೂಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದಲ್ಲಿ ಬುಧವಾರ ರಾತ್ರಿ ಇಡೀ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪ ಮೂರು ಮರಗಳು ಧರೆಗುರುಳಿವೆ.‌

ನಗರದ ಗಂಗೋತ್ರಿ ಬಡಾವಣೆ, ಜನತಾ ನಗರ, ಮಧುವನ ಸೇರಿದಂತೆ ಅನೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಸಿದ್ಧಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಲವತ್ತ ಗ್ರಾಮದಲ್ಲಿ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ‌. 

ಬುಧವಾರ ರಾತ್ರಿಯಿಂದ ಗುರುವಾರ ನಸುಕಿನವರೆಗೂ 10 ಸೆಂ.ಮೀನಷ್ಟು ಮಳೆ ಸುರಿದಿದ್ದು, ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ಭೂಕುಸಿತದ ದುರಸ್ಥಿ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಸೂಚನೆ ನೀಡಿದ್ದಾರೆ.

ಕುಸಿದಿರುವ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು