ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ 5 ಸೆಂಟಿಮೀಟರ್ ನಷ್ಟು ಮಳೆ: ಧರೆಗುರುಳಿದ ಮರಗಳು

Last Updated 26 ಮೇ 2020, 4:38 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಸೋಮವಾರ ತಡರಾತ್ರಿ 5 ಸೆಂಟಿಮೀಟರ್ ನಷ್ಟು ಧಾರಾಕಾರ ಮಳೆ ಸುರಿದಿದೆ. ತಾಲ್ಲೂಕಿನ ಇಲವಾಲ ಮತ್ತು ಗೋಪಾಲಪುರ ಗ್ರಾಮಗಳಲ್ಲಿ ತಲಾ ಒಂದೊಂದು ಮನೆಯ ಗೋಡೆಗಳು ಕುಸಿದಿವೆ.

ನಗರದಲ್ಲಿ 8 ಕಡೆ ಮರಗಳು ಧರೆಗುರುಳಿವೆ. ಹಸುವೊಂದು ಚಾಮರಾಜ ಜೋಡಿರಸ್ತೆಯಲ್ಲಿ ಮಳೆಗೆ ಸಿಲುಕಿ ಮೃತಪಟ್ಟಿದೆ. ಸಿಡಿಲಿನ ಆಘಾತಕ್ಕೆ ಮೃತಪಟ್ಟಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಉಳಿದಂತೆ, ನಂಜನಗೂಡಿನ ಹುಲ್ಲಹಳ್ಳಿಯಲ್ಲಿ 4, ಕೆ.ಆರ್.ನಗರ ತಾಲ್ಲೂಕಿನ ಅಡಗೂರಿನಲ್ಲಿ 3, ಹುಣಸೂರು ತಾಲ್ಲೂಕಿನ ಮೋದೋರಿನಲ್ಲಿ 3 ಹಾಗೂ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ 2 ಸೆಂಟಿಮೀಟರ್ ನಷ್ಟು ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT