ಗುರುವಾರ , ಮಾರ್ಚ್ 23, 2023
30 °C

ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು, ನಂಜನಗೂಡು ಹಾಗೂ ತಿ.ನರಸೀಪುರ ತಾಲ್ಲೂಕುಗಳಲ್ಲಿ ಸೋಮವಾರ ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದಿದೆ.

ರಾತ್ರಿ 12.30 ಕ್ಕೆ ಆರಂಭವಾದ ಮಳೆ ನಸುಕಿನವರೆಗೂ ಗುಡುಗು, ಸಿಡಿಲಿನೊಂದಿಗೆ ಸುರಿಯಿತು.
ಮೈಸೂರು ತಾಲ್ಲೂಕಿನ ಮೊಸನಬಾಯನಹಳ್ಳಿ ಹಾಗೂ ತಿ.ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 10 ಸೆಂ.ಮೀ ಮಳೆಯಾಗಿದೆ.

ನಂಜನಗೂಡಿನಲ್ಲಿ 8, ಕಡಕೊಳದಲ್ಲಿ 7 ಸೆಂ.ಮೀ ಮಳೆ ಸುರಿದಿದೆ. ಕೆ.ಆರ್.ನಗರದ, ಹುಣಸೂರು, ಎಚ್.ಡಿ.ಕೋಟೆ ಹಾಗೂ ಪಿರಿಯಾಪಟ್ಟಣ ವ್ಯಾಪ್ತಿಗಳಲ್ಲೂ ಸಾಧಾರಣ ಮಳೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರವೂ ಗುಡುಗು ಸಿಡಿಲಿನ ಸಹಿತ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು