ಸೋಮವಾರ, ಅಕ್ಟೋಬರ್ 18, 2021
24 °C

ಮೈಸೂರು: ‘ವಿಶ್ವಕರ್ಮರಿಗೆ ನೆರವು ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಎಲ್ಲ ಜಾತಿ, ವರ್ಗಕ್ಕೆ ಉಪಕಾರಿಗಳಾಗಿ ಕೆಲಸ ಮಾಡುತ್ತಿರುವ ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿ ಬಿ.ನರಸಿಂಹಮೂರ್ತಿ ಮನವಿ ಮಾಡಿದರು.

‘ಹೊಸ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದ್ದು, ಸಮಾಜದ ಜನರು ದೇಣಿಗೆ ನೀಡಬೇಕು. ಶಾಸಕರು, ಸಂಸದರು ಈಗಾಗಲೇ ನೀಡಿದ ಅನುದಾನವನ್ನು ವಾಪಸ್‌ ಪಡೆಯಬಾರದು’ ಎಂದು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

‘ವಿಶ್ವಕರ್ಮ ವಿದ್ಯಾವರ್ಧಕ ಸಂಘಕ್ಕೆ ಸದಸ್ಯರ ನೋಂದಣಿ ಆರಂಭವಾಗಿದ್ದು, ಸಮುದಾಯದವರು ಡಿ.31ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು’ ಎಂದು ಸಂಘದ ಅಧ್ಯಕ್ಷ ಎ.ಎನ್.ಸ್ವಾಮಿ ಕೋರಿದರು.

ಸಂಘದ ಪದಾಧಿಕಾರಿಗಳಾದ ಚಂದ್ರು, ಟಿ.ನಾಗರಾಜು, ಸಿ.ಹುಚ್ಚಪ್ಪಾಚಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.