ಬುಧವಾರ, ಮೇ 18, 2022
25 °C

ಮೈಸೂರಿನಲ್ಲಿ ಮನೆ ಕುಸಿತ; ಐವರು ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ತಿಲಕ್‌ ನಗರದಲ್ಲಿ ಶಿಥಿಲಗೊಂಡಿದ್ದ ಮನೆಯೊಂದು ಶುಕ್ರವಾರ ಬೆಳಿಗ್ಗೆ ಕುಸಿದಿದೆ. ಮನೆಯ ಹಿಂಭಾಗ ಸಿಲುಕಿದ್ದ ಐವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಕ್ಷಿಸಿದ್ದಾರೆ.

ರಾತ್ರಿಯಿಡಿ ಜಿಟಿಜಿಟಿ ಮಳೆ ಸುರಿಯಿತು. ಬೆಳಿಗ್ಗೆ 5.30ರ ಸುಮಾರಿನಲ್ಲಿ ಮನೆಯು ಕುಸಿದು ಬಿದ್ದಿತು. ಸದ್ಯ ಈ ಮನೆಯಲ್ಲಿ ಯಾರೂ ವಾಸಿಸುತ್ತಿರಲಿಲ್ಲ. ಆದರೆ ಹಿಂಭಾಗದಲ್ಲಿ ವಾಸವಿದ್ದವರು ಹೊರಗೆ ಬರಲಾಗದೆ ಪರದಾಡಿದರು. ಸ್ಥಳಕ್ಕೆ ಬಂದ ಪಾಲಿಕೆಯ ಅಭಯ್ ರಕ್ಷಣಾ ಪಡೆ ಹಾಗೂ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿ ನಿವಾಸಿಗಳನ್ನು ರಕ್ಷಿಸಿದರು.

ಮರಗಳು ಧರೆಗೆ: ಶುಕ್ರವಾರ ಬೆಳ್ಳಂಬೆಳಿಗ್ಗೆಯೇ ಮರಗಳು ಧರೆಗೆ ಉರುಳುತ್ತಿವೆ. ಇಲ್ಲಿನ ಬೃಂದಾವನ ಬಡಾವಣೆಯಲ್ಲಿ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದಿವೆ. ಹೊಸ ಜಿಲ್ಲಾಧಿಕಾರಿ ಸಮೀಪ ಎರಡು ಮರಗಳು ಬುಡ ಮೇಲಾಗಿವೆ. ನಗರದಲ್ಲಿ ದಟ್ಟ ಮೋಡ ಕವಿದ ವಾತಾವರಣ ಇದ್ದು, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು