ಮಂಗಳವಾರ, ಸೆಪ್ಟೆಂಬರ್ 28, 2021
25 °C
ಜನರ ಮನಸ್ಸಿನಲ್ಲಿ ಬಿಜೆಪಿ ಚಿಹ್ನೆ ಬಿತ್ತುವ ಪ್ರಯತ್ನ

ಎಲ್ಲೆಡೆ ‘ಕಮಲ’ದ ಹೂವು ಹಿಡಿದು ಅಡಗೂರು ಎಚ್‌.ವಿಶ್ವನಾಥ್‌ ಪ್ರಚಾರ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಅವರು ಪ್ರಚಾರದ ಸಂದರ್ಭದಲ್ಲಿ ಕಮಲದ ಹೂವು ಹಿಡಿದೇ ಮತಯಾಚನೆ ಮಾಡುತ್ತಿದ್ದಾರೆ. ಮತದಾರರಿಗೆ ತಮ್ಮ ಪಕ್ಷದ ಚಿಹ್ನೆಯನ್ನು ಮನದಟ್ಟು ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಶ್ವನಾಥ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು. ತೆನೆ ಹೊತ್ತ ಮಹಿಳೆ ಕೈ ಹಿಡಿದು ಮತದಾರರ ಮನೆ ಬಾಗಿಲಿಗೆ ತೆರಳಿದ್ದರು. ಚುನಾವಣೆಯಲ್ಲಿ ಗೆಲುವೂ ಸಾಧಿಸಿದ್ದರು. ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತದಾರರಿಗೆ ಚಿಹ್ನೆ ಗೊಂದಲ ಆಗಬಹುದು ಎಂಬ ಕಾರಣದಿಂದ ಕಮಲದ ಚಿಹ್ನೆಯನ್ನು ಮತದಾರರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನ ಪಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು