ಬುಧವಾರ, ಫೆಬ್ರವರಿ 8, 2023
18 °C

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಭದ್ರಕಾಳಿ ವಿಗ್ರಹ ಭಗ್ನ: ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಒಳ ಆವರಣದ ವೀರಭದ್ರೇಶ್ವರ ಮೂರ್ತಿಯ ಜೊತೆಯಲ್ಲಿದ್ದ ಭದ್ರಕಾಳಿ ವಿಗ್ರಹ ಭಗ್ನಗೊಂಡಿದ್ದು, ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ವಿಗ್ರಹವನ್ನು ಎಲ್ಲಿ ಇಡಲಾಗಿದೆ ಎಂಬ ವಿಷಯವನ್ನು ದೇವಾಲಯದ ಅಧಿಕಾರಿಗಳು ಗೋಪ್ಯವಾಗಿರಿಸಿದ್ದಾರೆ. ಅಧಿಕಾರಿಗಳ ಈ ನಡೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ, ಆಕ್ಷೇಪ ವ್ಯಕ್ತವಾಗಿದೆ.

‘ದೇವಾಲಯದ ಒಳಗೆ ಎರಡೂ ಬದಿಯಲ್ಲಿರುವ ಮೂರ್ತಿಗಳು ಅಲುಗಾಡುವ ಸ್ಥಿತಿ ತಲುಪಿದ್ದರೂ ದುರಸ್ತಿ ಮಾಡಿರಲಿಲ್ಲ. ಪುರಾತತ್ವ ಇಲಾಖೆ ಅಧಿಕಾರಿಗಳೂ ಆಸಕ್ತಿ ತೋರಿರಲಿಲ್ಲ’ ಎಂಬ ಆರೋಪವೂ ಇದೇ ವೇಳೆ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಅವರಿಗೆ ‘ಪ್ರಜಾವಾಣಿ’ ಕರೆ ಮಾಡಿದರೂ ಸಂಪರ್ಕಕ್ಕೆ ಸಿಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು