ದಲಿತರು ಮುಖ್ಯಮಂತ್ರಿಯಾದರೆ ಸಂತೋಷ: ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾದರೆ ನನಗೆ ಸಂತಸವೇ ಆಗುತ್ತದೆ. ಯಾವುದೇ ಕಾರಣಕ್ಕೂ ನಾನು ವಿರೋಧಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.\
ಇಲ್ಲಿನ ಹಿನಕಲ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಬೇರೆ ಬೇರೆ ರಾಜ್ಯಗಳಲ್ಲಿ ದಲಿತರು ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆ ಪಕ್ಷಗಳಲ್ಲಿ ಈ ಅವಕಾಶ ಇಲ್ಲ. ರಾಜ್ಯದಲ್ಲೂ ಹೈಕಮಾಂಡ್ ದಲಿತರನ್ನೇ ಮುಖ್ಯಮಂತ್ರಿಯಾಗಿ ಪರಿಗಣಿಸಿದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.