ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

195 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಇಂದು

Last Updated 20 ಜೂನ್ 2021, 15:22 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲಾದ್ಯಂತ ಸೋಮವಾರ ವಿಶೇಷ ಕೋವಿಡ್ ಲಸಿಕಾ ಮೇಳವು ಒಟ್ಟು 195 ಲಸಿಕಾ ಕೇಂದ್ರಗಳಲ್ಲಿ ನಡೆಯಲಿದೆ.

18 ವರ್ಷಕ್ಕಿಂತ ಹೆಚ್ಚು ವಯಸ್ಸಿನಆದ್ಯತಾ ವಲಯ ಗುಂಪಿನ ಫಲಾನುಭವಿಗಳಿಗೆ, ಮುಂಚೂಣಿ ಕಾರ್ಯಕರ್ತರಿಗೆ, ದುರ್ಬಲರಿಗೆ ಹಾಗೂ 44 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಲಸಿಕೆ ನೀಡಲಾಗುತ್ತದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 170, ಪಾಲಿಕೆ ವತಿಯಿಂದ 25 ಲಸಿಕಾ ಕೇಂದ್ರಗಳಲ್ಲಿ ಮತ್ತು 7 ಖಾಸಗಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಲಸಿಕಾ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಲಸಿಕಾ ಅಧಿಕಾರಿ ಡಾ.ರವಿ ‘ಪ‍್ರಜಾವಾಣಿ’ಗೆ ತಿಳಿಸಿದರು.

ಇದಕ್ಕಾಗಿ 39 ಸಾವಿರ ಕೋವಿಶೀಲ್ಡ್ ಮತ್ತು 12 ಸಾವಿರ ಕೋವ್ಯಾಕ್ಸಿನ್ ಲಸಿಕೆಗಳು ನಗರಕ್ಕೆ ಬಂದಿವೆ. ಈ ಮೊದಲು ಲಭ್ಯವಿದ್ದ ಕೇಂದ್ರಗಳಲ್ಲಿ ಮಾತ್ರವೇ ಕೋವ್ಯಾಕ್ಸಿನ್ ಸಿಗಲಿದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 19 ವಾರ್ಡ್‌ಗಳಲ್ಲಿ ಸೋಮವಾರದಿಂದ 2 ದಿನಗಳ ಕಾಲ ವಿಶೇಷ ಲಸಿಕಾ ಅಭಿಯಾನ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT