ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ; ಐವರು ಸಾವು

ಗೌಸಿಯಾನಗರದಲ್ಲಿ ಮಹಿಳೆ ಕೊಲೆ
Last Updated 27 ಜನವರಿ 2020, 11:21 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಐವರು ಮೃತಪಟ್ಟಿದ್ದಾರೆ.

ರಿಂಗ್‌ರಸ್ತೆಯಲ್ಲಿನ ಮಳೆಗಾರ ಮಾರಮ್ಮ ದೇಗುಲದ ಸಮೀಪ ಭಾನುವಾರ ಸಂಜೆ 6.30ರ ಸಮಯದಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಹಿನಕಲ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಣ್ಣ (52) ಅವರಿಗೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಜಣ್ಣ ಅವರು ಸಾಕಷ್ಟು ದೂರಕ್ಕೆ ಬಿದ್ದಿದ್ದಾರೆ. ತಲೆಗೆ ತೀವ್ರತರವಾದ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿಗೆ ಸ್ಕೂಟರ್‌ ಸಿಕ್ಕಿಹಾಕಿಕೊಂಡರೂ ನಿಲ್ಲಿಸದ ಚಾಲಕ ಉದ್ಬೂರಿನವರೆಗೂ ವೇಗವಾಗಿ ಹೋಗಿದ್ದಾನೆ. ನಂತರ, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರು ಚಾಲಕ ಶ್ರವಣಬೆಳಗೊಳದ ಪಿ.ಧನಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಮದ್ಯಸೇವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೆ.ಆರ್.ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ತಿ.ನರಸೀಪುರ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಸಮೀಪ ಬೈಕ್‌ನಲ್ಲಿ ಸಾಗುತ್ತಿದ್ದ ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿಯ ಗೊದ್ದಲೆಹುಂಡಿ ನಿವಾಸಿ ಸುರೇಶ್‌ ನಿಯಂತ್ರಣ ತಪ್ಪಿ ಅರಳಿಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಸಮೀಪದ ಸುತ್ತೂರು ಮುಖ್ಯರಸ್ತೆಯಲ್ಲಿ ಅತಿವೇಗವಾಗಿ ಬೈಕ್‌ನಲ್ಲಿ ಬಂದ ಬೆಳಗುಂದ ಗ್ರಾಮದ ನಿವಾಸಿ ಸಂಪತ್‌ಕುಮಾರ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ, ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಚ್.ಡಿ.ಕೋಟೆಯ ಸರಗೂರು ರಸ್ತೆಯ ಜಕ್ಕಳ್ಳಿ ಗ್ರಾಮದ ಬಳಿ ಮಂಚನಾಯಕ ಅವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟ್ರಾಕ್ಟರ್‌ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್.ನಗರ ತಾಲ್ಲೂಕಿನ ಸಾಲಿಗ್ರಾಮ ಸಮೀಪದ ಹಾಸನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಬ್ದುಲ್ ರೆಹಮಾನ್ ಅವರಿಗೆ ಎದುರಿನಿಂದ ಬಂದ ಬೈಕ್‌ ಸವಾರ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ. ಪ್ರಕರಣ ಸಾಲಿಗ್ರಾಮ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT