ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಪ್ರತಿಭಟನೆಗಳ ಮಹಾಪೂರ

ಹಲವು ಬೇಡಿಕೆಗಳ ಈಡೇರಿಕೆಗೆ ಪ್ರತ್ಯೇಕವಾಗಿ ಆಗ್ರಹ
Last Updated 14 ಜುಲೈ 2020, 14:05 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಮಂಗಳವಾರ ಹಲವು ಪ್ರತಿಭಟನೆಗಳು ಪ್ರತ್ಯೇಕವಾಗಿ ನಡೆದವು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅನುದಾನ ರಹಿತ ಶಾಲಾ, ಕಾಲೇಜುಗಳ ಬೋಧಕ ಮತ್ತು ಬೋಧಕೇತರರು, ಶಾಲಾ ವಿದ್ಯಾರ್ಥಿಗಳ ಪೋಷಕರು, ಅತಿಥಿ ಉಪನ್ಯಾಸಕರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ, ಕಾಲೇಜು ಬೋಧಕ ಮತ್ತು ಬೋಧಕೇತರ (ಕೋವಿಡ್ 19ರ ಪರಿಹಾರ) ಹೋರಾಟಗಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಹಲವು ಪ್ರತಿಭಟನಕಾರರು ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.

ಕೋವಿಡ್‌ ಪರಿಹಾರ ನೀಡಬೇಕು, ಕೋವಿಡ್‌ ಬಂದರೆ ಉಚಿತ ಚಿಕಿತ್ಸೆ ನೀಡಬೇಕು, ಆರ್‌ಟಿಇ ಯೋಜನೆಗೆ ಒಳಪಡದ ಖಾಸಗಿ ಶಾಲಾ, ಕಾಲೇಜುಗಳ, ಪದವಿ ಕಾಲೇಜುಗಳ ಶಿಕ್ಷಕರಿಗೂ ಪರಿಹಾರ ನೀಡಬೇಕು ಸೇರಿದಂತೆ 9 ಬೇಡಿಕೆಗಳುಳ್ಳ ಮನವಿ ‍ಪತ್ರವನ್ನು ಜಿಲ್ಲಾಧಿಕಾರಿಗೆ ಇವರು ನೀಡಿದರು.

ಸಂಘಟನೆಯ ಅಧ್ಯಕ್ಷ ರಾಜಶೇಖರಮೂರ್ತಿ, ಉಪಾಧ್ಯಕ್ಷ ಡಾ.ಅಂತೋಣಿ ಪಾಲ್‌ ರಾಜ್‌ ಹಾಗೂ ಇತರರು ಇದ್ದರು.

ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

‌ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಿಲ್ಲಿಸಬೇಕು, ಅತಿಥಿ ಉಪನ್ಯಾಸಕರನ್ನು ಹರ್ಯಾಣ ರಾಜ್ಯದ ಮಾದರಿಯಲ್ಲಿ ಕಾಯಂ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದುರ.

ಎಂಎಚ್‌ಆರ್‌ಡಿ ನಿರ್ದೇಶನದನ್ವಯ ಲಾಕ್‌ಡೌನ್‌ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಒತ್ತಾಯಿಸಿ ಅವರು ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.

ಸಂಘಟನೆಯ ಉಪಾಧ್ಯಕ್ಷ ಎನ್.ಮಹೇಶ್ ಸೇರಿದಂತೆ ಹಲವರು ಇದ್ದರು.

ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ಖಂಡನೆ

ಡಾ.ಬಿ.ಆರ್.ಅಂಬೇಡ್ಕರ್ ನಿವಾಸದ ಮೇಲೆ ಈಚೆಗೆ ನಡೆದ ದಾಳಿಯನ್ನು ಖಂಡಿಸಿ, ಅಂಬೇಡ್ಕರ್ ಸೇನೆಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕೂಡಲೇ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಅಧ್ಯಕ್ಷ ನಾಗೇಂದ್ರ ಬಸವಟ್ಟಿಗೆ, ಉಪಾಧ್ಯಕ್ಷ ಮಹೇಶ್ ತಗಡೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕಂದೇಗಾಲ ಹಾಗೂ ಇತರರು ಇದ್ದರು.

ಶುಲ್ಕ ವಸೂಲಿಗೆ ಒತ್ತಡ; ಪ್ರತಿಭಟನೆ

ಪಿ.ಜಿ.ಜನಸ್ಪಂದನ ಫೌಂಡೇಷನ್‌ ನೇತೃತ್ವದಲ್ಲಿ ಸೀತಾವಿಲಾಸ ರಸ್ತೆಯಲ್ಲಿ ಕಾರ್ಯಕರ್ತರು ಖಾಸಗಿ ಶಾಲೆಗಳ ಶುಲ್ಕ ವಸೂಲಾತಿ ವಿರುದ್ಧ ಪ್ರತಿಭಟನೆ ನಡೆಸಿದರು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಪಾವತಿಸಬೇಕು ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಪಿ.ಪ್ರಶಾಂತಗೌಡ, ಮುಖಂಡರಾದ ರಾಮಪ್ರಸಾದ್, ಮಹದೇವ್, ಗುರುಪ್ರಸಾದ್, ಮಂಜು ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT