ಬುಧವಾರ, ನವೆಂಬರ್ 25, 2020
24 °C
ಕಾಲಮಿತಿ ಬಡ್ತಿ ಮಂಜೂರು ಮಾಡಲು ಒತ್ತಾಯ

‘ಡಿಪ್ಲೊಮಾ: ವಿಜ್ಞಾನ ವಿಷಯ ಇರಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಡಿಪ್ಲೊಮಾ ಕೋರ್ಸ್‌ಗಳಲ್ಲಿ ವಿಜ್ಞಾನ ವಿಷಯಗಳನ್ನು ಕಡ್ಡಾಯ ವಾಗಿ ಅಳವಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರು ಉನ್ನತ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.

ಡಿಪ್ಲೊಮಾ ಕೋರ್ಸ್‌ಗಳಿಗೆ ಹೊಸದಾಗಿ ತಯಾರಿಸಿರುವ ಸಿ-20 ‍ಪಠ್ಯಕ್ರಮದಲ್ಲಿ ಅಪ್ಲೈಡ್‌ ಸೈನ್ಸ್‌ ಮತ್ತು ಅಪ್ಲೈಡ್‌ ಸೈನ್ಸ್‌ ಲ್ಯಾಬ್‌ ವಿಷಯಗಳನ್ನು ತೆಗೆದುಹಾಕಲಾಗಿದೆ. ಇದರಿಂದ ಈ ವಿಷಯಗಳನ್ನು ಬೋಧನೆ ಮಾಡುತ್ತಿರುವ ಸಾವಿರಾರು ಉಪನ್ಯಾ ಸಕರು ಬೀದಿಗೆ ಬೀಳುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಮುಂದೆ ನೌಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಿದ್ದು, ಎಲ್ಲ ಪರೀಕ್ಷೆಗಳಲ್ಲೂ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಹೆಚ್ಚಿರುತ್ತವೆ. ವಿಜ್ಞಾನ ವಿಷಯಗಳನ್ನು ಕೈಬಿಟ್ಟಿರುವುದರಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೊಂದರೆಯಾಗಲಿದೆ. ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ನಾವೇ ಕೆಂಪು ಹಾಸಿನ ಸ್ವಾಗತ ಕೊಟ್ಟು, ನಮ್ಮ ಹುದ್ದೆಗಳನ್ನು ಅವರಿಗೆ ಕೊಟ್ಟಂತಾಗುತ್ತಿದೆ ಎಂದಿದ್ದಾರೆ.

ಕಾಲಮಿತಿ ಬಡ್ತಿ ಮಂಜೂರು ಮಾಡಿ: ಮೈಸೂರು ಮತ್ತು ಬೆಂಗಳೂರು ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ತತ್ಸಮಾನ ವೃಂದದ ಬಿ–ಶ್ರೇಣಿಯ ಅಧಿಕಾರಿ
ಗಳಿಗೆ 20 ವರ್ಷಗಳ ಕಾಲಮಿತಿ ಬಡ್ತಿಯನ್ನು ಕೂಡಲೇ ಮಂಜೂರು ಮಾಡುವಂತೆ ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ.

ಗುಲ್ಬರ್ಗಾ ಮತ್ತು ಧಾರವಾಡ ಆಯುಕ್ತಾಲಯದ ವ್ಯಾಪ್ತಿಯಲ್ಲಿ 20 ವರ್ಷಗಳ ಕಾಲಮಿತಿ ಬಡ್ತಿಯನ್ನು ಸಕಾಲದಲ್ಲಿ ಮಂಜೂರು ಮಾಡ ಲಾಗಿದೆ. ಮೈಸೂರು ಮತ್ತು ಬೆಂಗ ಳೂರು ವಿಭಾಗದಲ್ಲಿ ವಿಳಂಬ ಮಾಡು ತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.