ಮಂಗಳವಾರ, ಅಕ್ಟೋಬರ್ 27, 2020
28 °C

ಕೆ.ಆರ್.ಆಸ್ಪತ್ರೆ ಹಾಸಿಗೆ ಹೆಚ್ಚಿಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಕೆ.ಆರ್‌.ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು. 

ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳು, ವೈದ್ಯರು, ನರ್ಸ್‌ಗಳೊಂದಿಗೆ ಚರ್ಚಿಸಿದರು. ಆಕ್ಸಿಜನ್‌ ಸಿಲಿಂಡರ್‌, ವೆಂಟಿಲೇಟರ್‌ ವ್ಯವಸ್ಥೆಯನ್ನು ಪರಿಶೀಲಿಸಿದರು.

ಸದ್ಯ ಕೆ.ಆರ್‌.ಆಸ್ಪತ್ರೆಯಲ್ಲಿ 178 ಹಾಸಿಗೆಗಳು ಇವೆ. ಇವುಗಳನ್ನು ಹೆಚ್ಚಿಗೆ ಮಾಡಬೇಕು. ಟ್ರಾಮಾ ಕೇರ್ ಕೇಂದ್ರದಲ್ಲಿ ಆಕ್ಸಿಜನ್‌ ಹಾಸಿಗೆ ವ್ಯವಸ್ಥೆ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸಿ ಎಂದು ಹೇಳಿದರು.

ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕೋವಿಡ್‌ ಚಿಕಿತ್ಸೆಗೆ ಬಳಸಿಕೊಳ್ಳಿ ಎಂದು ಸೂಚನೆ ನೀಡಿದರು.

ಮೈಸೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಡೀನ್‌ ಡಾ.ಸಿ.ಪಿ.ನಂಜರಾಜ್‌, ಕೆ.ಆರ್‌.ಆಸ್ಪತ್ರೆ ಅಧೀಕ್ಷಕ ನಂಜುಂಡಸ್ವಾಮಿ, ಚೆಲುವಾಂಬ ಆಸ್ಪತ್ರೆ ಅಧೀಕ್ಷಕಿ ಡಾ.ಪ್ರಮೀಳಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು