ಮೈಸೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸಬೇಕು ಎಂದು ಕನಕದಾಸರ ಜಯಂತೋತ್ಸವ ಸಮಿತಿಯ ಸಂಚಾಲಕ ಎಂ.ಶಿವಣ್ಣ ಒತ್ತಾಯಿಸಿದರು.

ಸಮುದಾಯದ ಅಭಿವೃದ್ಧಿಗೆಂದು ₹ 500 ಕೋಟಿ ಹಣವನ್ನು ನಿಗದಿ ಮಾಡಬೇಕು ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಬ್ಯಾಂಕ್ ಎಂ.ಪುಟ್ಟಸ್ವಾಮಿ ಮಾತನಾಡಿ, ‘ಡಿ. 3ರಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಿಸಲಾಗುವುದು. ಸಂಜೆ 5.30ಕ್ಕೆ ಸಿದ್ದಾರ್ಥನಗರದಲ್ಲಿರುವ ಕಾಗಿನೆಲೆ ಶಾಖಾ ಮಠದ ಕನಕ ಗುರುಪೀಠದಲ್ಲಿ ಶಿವಾನಂದಪುರಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗುವುದು’ ಎಂದು ತಿಳಿಸಿದರು.

ಕೋವಿಡ್ ಕಾರಣದಿಂದಾಗಿ ವಿಜೃಂಭಣೆಯಿಂದ ಉತ್ಸವ ಆಚರಣೆ ಮಾಡಲಾಗುತ್ತಿಲ್ಲ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.