ಭಾನುವಾರ, ಅಕ್ಟೋಬರ್ 25, 2020
28 °C

ಅಂತರ ಜಿಲ್ಲಾ ಬೈಕ್ ಕಳ್ಳರ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸೂರು: ನಗರದ ಕಾರ್ಖಾನೆ ರಸ್ತೆಯಲ್ಲಿ ನಡೆದ ಮೋಟಾರ್ ಬೈಕ್ ಕಳವಿಗೆ ಸಂಬಂಧಿಸಿದ ಮೂವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದೆ ಎಂದು ಸಿಪಿಐ ಪೂವಯ್ಯ ತಿಳಿಸಿದರು.

ಮೈಸೂರು ಜಿಲ್ಲೆ ಹುಣಸೂರು, ಮಡಿಕೇರಿ ಮತ್ತು ಹಾಸನ ಜಿಲ್ಲೆ ಅರಕಲಗೂಡು ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಮೂರು ಆರೋಪಿಗಳು ಭಾಗಿ ಆಗಿರುವುದು ತನಿಖೆಯಿಂದ ತಿಳಿದು ಬಂದಿದೆ.

ಕುಶಾಲನಗರದ ಸುಬ್ರಹ್ಮಣ್ಯ, ವಿಕ್ಟರ್ ಮತ್ತು ಮದನ್ ಬಂಧಿತ ಆರೋಪಿಗಳು.

ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶಿವಕುಮಾರ್, ಲತೇಶ್‌ಕುಮಾರ್, ಪಂಚಾಕ್ಷರಿಸ್ವಾಮಿ, ಪ್ರಭಾಕರ್, ಪುಟ್ಟನಾಯಕ್ ಸಿಬ್ಬಂದಿ ಮಲ್ಲಿಕಾರ್ಜುನ, ಕಿರಣ್‌ಕುಮಾರ್, ಮನೋಹರ, ವೆಂಕಟೇಶ ಪ್ರಸಾದ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.