ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಕೆ.ಎಸ್‌.ರಂಗಪ್ಪಗೆ ‘ಅಶುತೋಷ್‌ ಮುಖರ್ಜಿ ಫೆಲೋಷಿಪ್’

Last Updated 4 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಮೈಸೂರು: ಇಂಡಿಯನ್‌ ಸೈನ್ಸ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಅವರು ದಿ ಇಂಡಿಯನ್‌ ಸೈನ್ಸ್‌ ಕಾಂಗ್ರೆಸ್‌ ಅಸೋಸಿಯೇಷನ್ (ಐಎಸ್‌ಸಿಎ) ನೀಡುವ ಪ್ರತಿಷ್ಠಿತ ‘ಅಶುತೋಷ್‌ ಮುಖರ್ಜಿ ಫೆಲೋಷಿಪ್ 2021–22’ಕ್ಕೆ ಆಯ್ಕೆಯಾಗಿದ್ದಾರೆ.

ಪ್ರತಿ ತಿಂಗಳು ₹ 30 ಸಾವಿರ ಗೌರವಧನ ಹಾಗೂ ವಾರ್ಷಿಕ ₹ 1 ಲಕ್ಷ ಪ್ರೋತ್ಸಾಹ ಧನವನ್ನು ಈ ಫೆಲೋಷಿಪ್ ಒಳಗೊಂಡಿದೆ. ತನ್ನ ಆಜೀವ ಸದಸ್ಯರ ಸೇವೆಯನ್ನು ಪಡೆಯುವ ಉದ್ದೇಶದಿಂದ ಐಎಸ್‌ಸಿಎ ಫೆಲೋಷಿಪ್‌ ಸ್ಥಾಪಿಸಿದೆ. ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ರಂಗಪ್ಪ ಅವರನ್ನು ಆಯ್ಕೆ ಮಾಡಿದೆ. ಫೆಲೋಷಿಪ್‌ನ ಅವಧಿ ಏ.1 ರಿಂದ ಆರಂಭವಾಗಿ ಮೂರು ವರ್ಷಗಳು ಇರಲಿವೆ. ಈ ಅವಧಿಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಮತ್ತೆ ಎರಡು ವರ್ಷಗಳವರೆಗೆ ಅವಧಿ ವಿಸ್ತರಿಸಲಾಗುವುದು ಎಂದು ಐಎಸ್‌ಸಿಎ ಪ್ರಕಟಣೆ ತಿಳಿಸಿದೆ.

‘ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮಾಡಿರುವ ಕೆಲಸವನ್ನು ಗುರುತಿಸಿ ಐಎಸ್‌ಸಿಎ ಈ ಫೆಲೋಷಿಪ್‌ಗೆ ನನ್ನನ್ನು ಆಯ್ಕೆ ಮಾಡಿದೆ. ಇದು ಇನ್ನಷ್ಟು ಸಂಶೋಧನೆಗೆ ಉತ್ತೇಜನ ನೀಡಿದೆ’ ಎಂದು ರಂಗಪ್ಪ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT