ಗೋಹತ್ಯೆ ನಿಷೇಧಕ್ಕಿಂತ ಅಸ್ಪೃಶ್ಯತೆ ತೊಡೆದು ಹಾಕುವುದು ಮುಖ್ಯ: ಶ್ರೀನಿವಾಸಪ್ರಸಾದ್

ಮೈಸೂರು: ಗೋಹತ್ಯೆ ನಿಷೇಧಕ್ಕಿಂತಲೂ ಅಸ್ಪೃಶ್ಯತೆ ತೊಡೆದು ಹಾಕುವ ಕುರಿತು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಆಹಾರ ಪದ್ಧತಿ ತೀರಾ ವೈಯಕ್ತಿಕವಾದದ್ದು. ಸಸ್ಯಾಹಾರಿಗಳು ಮಾಂಸಾಹಾರಿಗಳಾಗುತ್ತಾರೆ, ಮಾಂಸಾಹಾರಿಗಳು ಸಸ್ಯಾಹಾರಿಗಳಾಗುತ್ತಾರೆ. ಇದಕ್ಕಿಂತಲೂ ಹೆಚ್ಚಾಗಿ ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ಪ್ರಯತ್ನಿಸಬೇಕು. ಈ ಕುರಿತು ಈ ಹಿಂದೆಯೇ ವಿಧಾನಸಭೆಯಲ್ಲಿ ವಿವರವಾಗಿ ಭಾಷಣ ಮಾಡಿದ್ದೆ ಎಂದು ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.