ಮೈಸೂರು: ಚಾಮುಂಡಿಬೆಟ್ಟದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ಅನಾವರಣ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಸ್ಥಾಪಿಸಿರುವ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿಯನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಶುಕ್ರವಾರ ಬೆಳಿಗ್ಗೆ ಅನಾವರಣಗೊಳಿಸಿದರು.
ಬೆಟ್ಟದ ಗ್ರಾಮಸ್ಥರು ಸೇರಿಕೊಂಡು ತಮ್ಮದೇ ಖರ್ಚಿನಲ್ಲಿ ಪುತ್ಥಳಿ ನಿರ್ಮಿಸಿ, ಅನಾವರಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಶಿಲ್ಪಿ ಸೂರ್ಯಪ್ರಕಾಶ್ ಅವರು ಮೂರೂವರೆ ಅಡಿ ಎತ್ತರದ ಪುತ್ಥಳಿ ನಿರ್ಮಿಸಿದ್ದಾರೆ.
'ಚಾಮುಂಡಿ ಬೆಟ್ಟದ ಗ್ರಾಮಸ್ಥರು ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ನಿರ್ಮಿಸಿರುವುದು ತುಂಬಾ ಸಂತೋಷ. ಈ ಮೂಲಕ ಮಹಾರಾಜರ ಕೊಡುಗೆಗಳನ್ನು ಸ್ಮರಿಸುವ ಕೆಲಸ ಮಾಡಿದ್ದಾರೆ' ಎಂದು ಪ್ರಮೋದಾದೇವಿ ಹೇಳಿದರು.
ಪುತ್ಥಳಿ ಅನಾವರಣ ಸಮಯದಲ್ಲೇ ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.