ಶುಕ್ರವಾರ, ಅಕ್ಟೋಬರ್ 22, 2021
29 °C

ಮೈಸೂರು: ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕೆ.ಆರ್.ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕವು ವಿದ್ಯಾರಣ್ಯಾಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಮೋದಿ ಯುಗ್ ಉತ್ಸವ್‌ನಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಜತೆ ವೇದಿಕೆ ಹಂಚಿಕೊಂಡಿದ್ದಾರೆ. ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ ಅವರನ್ನು ಪಕ್ಕಕ್ಕೆ ಸರಿಸಿ ಅವರ ಆಸನದಲ್ಲಿ ಸಾ.ರಾ.ಮಹೇಶ್ ಕುಳಿತರು.

ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು ಅವರೊಂದಿಗೆ ಕುಳಿತ ಸಾ.ರಾ.ಮಹೇಶ್ ಅವರು ಕೇಸರಿ ಶಾಲನ್ನು ಬಿಜೆಪಿ ಕಾರ್ಯಕರ್ತರಂತೆ ತನ್ನ ಹೆಗಲಿಗೆ ಹಾಕಿಕೊಳ್ಳುವ ಮೂಲಕ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ... ಮೈಸೂರು: ದಸರಾ ಉದ್ಘಾಟಕರಾದ ಎಸ್.ಎಂ.ಕೃಷ್ಣಗೆ ಅದ್ದೂರಿ ಸ್ವಾಗತ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು