ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಪತ್ರಕರ್ತ, ಬರಹಗಾರ ನಿರಂಜನ್ ನಿಕ್ಕಂ ಇನ್ನಿಲ್ಲ

Last Updated 17 ಫೆಬ್ರುವರಿ 2021, 3:07 IST
ಅಕ್ಷರ ಗಾತ್ರ

ಮೈಸೂರು: ಹಿರಿಯ ಪತ್ರಕರ್ತ ಹಾಗೂ ಬರಹಗಾರ ನಿರಂಜನ್ ನಿಕ್ಕಂ (66) ಅವರು ಮಂಗಳವಾರ ರಾತ್ರಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ನಿರಂಜನ್ ನಿಕ್ಕಂ ಅವರು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮೈಸೂರು ಬ್ಯೂರೊ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇವರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ.

ಪಾರ್ಥೀವ ಶರೀರವನ್ನು ಇಲ್ಲಿನ ವಿಜಯನಗರದ 3ನೇ ಹಂತದ ಇವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ. ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT